ಪ್ರತಿ ವರ್ಷ ಮಾರ್ಚ್ 8ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಸ್ಮರಿಸಲು ಮತ್ತು ಸಮಾನತೆ-ಹಕ್ಕುಗಳನ್ನು ಪ್ರತಿಪಾದಿಸಲು ಈ ದಿನವನ್ನು ಆಚರಿಸಲಾಗುತ್ತದೆ. 1975ರ ಮಾರ್ಚ್ 8ರಂದು ವಿಶ್ವಸಂಸ್ಥೆಯು ಅಧಿಕೃತವಾಗಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿವರ್ಷ ಮಾರ್ಚ್ 8ರಂದು ಪ್ರಪಂಚದಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿಕೊಂಡು ಬರಲಾಗಿದೆ ಎಂದು ಜೆಎಂಜೆ ಸಮಾಜ ಸೇವಾ ಸಂಸ್ಥೆ ಕಾರ್ಯಕರ್ತರು ಹೇಳಿದರು.
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯ ಎಲ್ಲ ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಜೆಎಂಜೆ ಸಮಾಜ ಸೇವಾ ಸಂಸ್ಥೆಯಿಂದ ಮಾರ್ಚ್ 6ರಂದು ದೇವರ ಹಿಪ್ಪರಗಿ ತಾಂಡದ ಸೇವಾಲಾಲ ದೇವಾಲಯದ ಬಳಿ ಹಮ್ಮಿಕೊಂಡಿದ್ದ ಮಹಿಳೆಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
“49ನೇ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಿತ್ತಿದ್ದೇವೆ. ಮಹಿಳೆಯರಿಗೂ ಸಮಾನ ಸ್ಥಾನಮಾನ ಸಿಗಬೇಕು ಎಂಬುದು ಈ ದಿನದ ಉದ್ದೇಶವಾಗಿದೆ. ಮಹಿಳಾ ಸಬಲೀಕರಣದ ಮಹತ್ವ ಸಾರಲು, ಲಿಂಗ ಪಕ್ಷಪಾತ ಮುಕ್ತ ಸಮಾಜವನ್ನು ನಿರ್ಮಿಸಲು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆಯನ್ನು ಸ್ಮರಿಸಲು, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ನಿಂದನೆಯನ್ನು ತಡೆಯಲು ಜಾಗೃತಿ ಮೂಡಿಸಲು ಮತ್ತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿವಾದಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಮಹಿಳೆಯರ ಹಕ್ಕುಗಳ ಬಗ್ಗೆ ಗಮನ ಸೆಳೆಯಲು ಮತ್ತು ಜನರಿಗೆ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳು ಮತ್ತು ಅಭಿಯಾನಗಳನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ” ಎಂದು ಹೇಳಿದರು.
“ಪ್ರತಿವರ್ಷ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ವಿಶ್ವಸಂಸ್ಥೆ ಒಂದು ಥೀಮ್(ಘೋಷವಾಕ್ಯ) ನೀಡುತ್ತದೆ. ‘ಪ್ರಗತಿಯ ವೇಗವರ್ಧನೆಗೆ ಮಹಿಳೆಯ ಮೇಲೆ ಹೂಡಿಕೆ’ ಎಂಬುದು ಈ ವರ್ಷದ ಥೀಮ್ ಆಗಿದೆ. ಮಹಿಳೆಯರಿಗೆ ಪ್ರಯೋಜನವಾಗುವಂತಹ ಆರೋಗ್ಯ, ಶಿಕ್ಷಣ, ಉದ್ಯೋಗ ಇತ್ಯಾದಿ ಯೋಜನೆಗಳನ್ನು ಹೆಚ್ಚಿಸಿ, ಈ ಯೋಜನೆಗಳ ಮೇಲೆ ಹಣಕಾಸು ಹೂಡಿಕೆ ಮಾಡುವುದಾಗಿದೆ. ಹೀಗೆ ಮಾಡಿದಾಗ ಮಹಿಳೆಯರ ಬೆಳವಣಿಗೆ ಜತೆಗೆ ಆಯಾ ದೇಶದ ಪ್ರಗತಿ ಕೂಡ ಹೆಚ್ಚು ವೇಗ ಪಡೆದುಕೊಳ್ಳುತ್ತದೆ ಎಂಬುದು ಈ ಥೀಮ್‌ನ ಅರ್ಥವಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ; ವರದಿ ಬಹಿರಂಗಗೊಳಿಸದಂತೆ ಬೆದರಿಕೆ
ಡಾ ಪ್ರಭುಗೌಡ ಪಾಟೀಲ ವೈದ್ಯರು, ದಾನಾಬಾಯಿ, ಚವ್ಹಾಣ ಪಟ್ಟಣ ಪಂಚಾಯತ್ ಸದ್ಯಸರು ಹಾಗೂ ಸಿಸ್ಟರ್, ಹೃದಯಾ, ಜೆಎಂಜೆ ಕಾರ್ಯ ಸಯೋಂಜಕರು ಮತ್ತು ಎಲ್ಲ ಮಹಿಳಾ ಸ್ವಸಹಾಯ ಒಕ್ಕೂಟಗಳ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಿ ಪೋತ್ಸಾಹದ ಹಿತನುಡಿಗಳನ್ನು ನೀಡಿದರು.
