ಪಾಕ್ ಪರ ಘೋಷಣೆ ವಿವಾದ | ನಾಸೀರ್ ಹುಸೇನ್‌ಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗೆ ಪತ್ರ

Date:

Advertisements

ರಾಜ್ಯಸಭೆ ಚುನವಣೆ ನಡೆದ ದಿನ ವಿಧಾನಸೌಧದಲ್ಲಿ ‘ಪಾಕ್‌ ಪರ ಘೋಷಣೆ’ ಕೂಗಿದ್ದ ಪ್ರಕರಣ ಇನ್ನೂ ತನಿಖೆಯಲ್ಲಿದೆ. ತನಿಖೆ ಮುಗಿಯುವವರೆಗೂ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್‌, ಐಪಿಎಸ್ ಅಧಿಕಾರಿಗಳ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

“ನಾಸೀರ್ ಹುಸೇನ್ ಅವರ ಸಮ್ಮುಖದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಎಫ್‌ಎಸ್‌ಎಲ್‌ ವರದಿಯಲ್ಲೂ ಅದು ಸಾಬೀತಾಗಿದೆ. ಹೀಗಾಗಿ, ಹುಸೇನ್ ಅವರಿಗೆ ಪ್ರಮಾಣವಚನ ಬೋಧಿಸಬಾರದು” ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರಲ್ಲಿ ಮನವಿ ಮಾಡಿದ್ದಾರೆ.

ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದನ್ನು ವಿಪಕ್ಷ ನಾಯಕ ಆರ್​ ಅಶೋಕ್ ಸ್ವಾಗತಿಸಿದ್ದಾರೆ. ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಘಟನೆ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು 17 ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಘನತೆವೆತ್ತ ಪರಾಷ್ಟಪತಿಗಳು ಹಾಗೂ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ” ಎಂದಿದ್ದಾರೆ.

Advertisements

“ದೇಶದ್ರೋಹಿಗಳನ್ನು ಪೋಷಿಸಿ, ಬೆಂಬಲಿಸಿ ಅವರು ರಾಷ್ಟ್ರ ವಿದ್ರೋಹದ ಪಾಪದ ಕೆಲಸ ಮಾಡಿದ ಮೇಲೂ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಒಳಗೆ ಪ್ರವೇಶಿಸುವ ಅರ್ಹತೆಯೇ ಇಲ್ಲ. ಇಂತಹ ವ್ಯಕ್ತಿಗಳಿಗೆ ರಾಜ್ಯಸಭಾ ಸದಸ್ಯತ್ವ ನೀಡಲು ಹೊರಟಿರುವ ಕಾಂಗ್ರೆಸ್‌ ಪಕ್ಷಕ್ಕೆ ನಾಚಿಕೆಯಾಗಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅಅವರಿಗೆ ಕಿಂಚಿತ್ತಾದರೂ ದೇಶಪ್ರೇಮವಿದ್ದರೆ ನಾಸಿರ್ ಹುಸೇನ್ ಅವರ ರಾಜೀನಾಮೆ ಪಡೆದು ಮರುಚುನಾವಣೆ ನಡೆಸಬೇಕು”‌ ಎಂದು ಅಶೋಕ್‌ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್‌ ಪರ ಘೋಷಣೆ ಕೂಗಲಾಗಿದೆ ಎಂದು ಮಾಧ್ಯಮಗಳು ಹಬ್ಬಿಸಿದ ಸುದ್ದಿ ರಾಜ್ಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ಬಿಜೆಪಿಯೇ ಖಾಸಗಿ ಎಫ್‌ಎಸ್‌ಎಲ್‌ ವರದಿ ತರಿಸಿ, ಪಾಕ್‌ ಪರ ಘೋಷಣೆ ಕೂಗಿರುವುದು ಸತ್ಯವೆಂದು ಹೇಳುತ್ತಿದೆ. ಆದರೆ, ಸರ್ಕಾರಿ ಎಫ್‌ಎಸ್‌ಎಲ್‌ ವರದಿ ಇನ್ನೂ ಬಂದಿಲ್ಲ. ಆ ವರದಿ ಬರುವವರೆಗೂ ಬೇರಾವುದೇ ವರದಿಗಳ ಮೇಲೆ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸದ್ಯ, ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X