ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ ಹಲವು ಸಮನ್ಸ್‌ಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಹೊಸ ದೂರುಗಳ ಮೇರೆಗೆ ದೆಹಲಿ ಹೈಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.
ಮಾರ್ಚ್ 16ರೊಳಗೆ ಹಾಜರಾಗಬೇಕೆಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಕೋರ್ಟ್ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಸೆಕ್ಷನ್ 8ರಡಿ 8 ಸಮನ್ಸ್ ಜಾರಿಗೊಳಿಸಿದರೂ ಎಎಪಿ ಮುಖ್ಯಸ್ಥರು ಸಮನ್ಸ್‌ಗಳಿಗೆ ಗೌರವ ನೀಡಿಲ್ಲ ಎಂದು ಜಾರಿ ನಿರ್ದೇಶನಾಲಯ ಮಾ.06 ರಂದು ದೂರು ದಾಖಲಿಸಿತ್ತು.
ಕೋರ್ಟ್‌ನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯ ಮಲ್ಹೋತ್ರಾ ಇಂದು ಅರವಿಂದ್ ಕೇಜ್ರಿವಾಲ್ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!
ಸಮನ್ಸ್ ಬಂದ ನಂತರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕರಿಗೆ ಇ.ಡಿ ಮೂಲಕ ಕಿರುಕುಳ ನೀಡುತ್ತಿದ್ದು, ಬಿಜೆಪಿಗೆ ಸೇರ್ಪಡೆಯಾಗಬೇಕೆಂದು ಒತ್ತಾಯಿಸುತ್ತಿದ್ದಾರೆ.
ದೆಹಲಿ ಹೈಕೋರ್ಟ್ ಮೊದಲ ಮೂರು ಸಮನ್ಸ್‌ಗಳಿಗೆ ಸಂಬಂಧಿಸಿದಂತೆ ಮಾರ್ಚ್ 6 ರಂದು ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪ ಪಟ್ಟಿಯಲ್ಲಿ ಹಲವು ಬಾರಿ ಕೇಜ್ರಿವಾಲ್ ಹೆಸರನ್ನು ಉಲ್ಲೇಖಿಸಿದೆ. 2021-22ರ ಅಬಕಾರಿ ನೀತಿ ಜಾರಿಗೊಳಿಸುವ ಸಂದರ್ಭ ಆರೋಪಗಳನ್ನು ದೆಹಲಿ ಮುಖ್ಯಮಂತ್ರಿ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಹಾಗೂ ವಿಜಯ್ ನಾಯರ್ ಒಳಗೊಂಡಂತೆ ಹಲವು ನಾಯಕರನ್ನು ಇ.ಡಿ ಬಂಧಿಸಿದೆ.
