ದಕ್ಷಿಣ ಕನ್ನಡ | ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ

Date:

Advertisements

‘ಸಮಸ್ತ’ ಮದ್ರಸ ಮುಅಲ್ಲಿಂ ಒಕ್ಕೂಟವು ಆಯೋಜಿಸಿದ ಮುಸಾಬಖ ಕಾರ್ಯಕ್ರಮಗಳ ಮುಖಾಂತರ ಹೊರಬರುವ ನವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಬೇಕಾದ ಪ್ರೋತ್ಸಾಹ ಕೊಡಬೇಕಾದದ್ದು ನಮ್ಮ ಕರ್ತವ್ಯವಾಗಿದ್ದು, ಪ್ರತಿಭೆಗಳ ಬೆಳವಣಿಗೆಗೆ ಇಂತಹ ಅಭಿನಂದನಾ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಹಾಗೂ ಗಾಂಧಿನಗರ ಜುಮಾ ಮಸೀದಿ ಅಧ್ಯಕ್ಷ ಹಾಜಿ ಕೆ ಎಂ ಮುಸ್ತಫಾ ಹೇಳಿದರು.

ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಾಷ್ಟ್ರಮಟ್ಟದಲ್ಲಿ ಹಾಗೂ ರಾಜ್ಯಮಟ್ಟದ ಮುಸಾಬಕ ಪ್ರತಿಭಾ ಸಂಗಮದಲ್ಲಿ ಪ್ರಶಸ್ತಿ ಗಳಿಸಿದ ಅರಂತೋಡು ನಸ್ರತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳಿಗೆ‌ ಬಿಳಿಯಾರು ಬದ್ರುದ್ದೀನ್ ಪಟೇಲ್‌ ಅವರ ಮನೆಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪಟೇಲ್ ಟ್ರಸ್ಟ್ ಮಾಡುತ್ತಿರುವ ಹಲವು ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು

Advertisements

ಅಲ್ ಹಾಜ್ ಇಸಾಕ್ ಬಾಖವಿ ಮಾತನಾಡಿ, “ವಿದ್ಯಾರ್ಥಿಗಳ ಸಾಧನೆಯಿಂದ ನಾವು ಹೆಮ್ಮೆ ಪಡುವಂತಾಗಿದ್ದು, ನಮ್ಮ ಮದರಸದಿಂದ ಅರಳಿದ ಪ್ರತಿಭೆಗಳು ಇನ್ನೂ ಬೆಳಗಿ ಸಮಾಜಕ್ಕೆ ಬೆಳಕು ನೀಡುವಂತಾಗಲಿ. ಅದೇ ರೀತಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅದಕ್ಕೆ ವೇದಿಕೆಯನ್ನು ಕಲ್ಪಿಸಿ ಅವರನ್ನು ಸಾಧಕರನ್ನಾಗಿ ಮಾಡುವ ಪಟೇಲ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ವೈಖರಿ ನಿಜಕ್ಕೂ ಶ್ಲಾಘನೀಯ. ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ” ಎಂದು ಹೇಳಿ ಎಲ್ಲ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಪಟೇಲ್ ಚಾರಿಟೇಬಲ್ ಟ್ರಸ್ಟ್ ಅರಂತೋಡು ವತಿಯಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳಾದ ಮುಝಮ್ಮಿಲ್, ಮುಹಮ್ಮದ್ ಹಫೀಜ್, ಶಾಕಿರ್ ಗೂನಡ್ಕ ಅವರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮ ಮಟ್ಟದಲ್ಲಿ ಉತ್ತಮ ಶಿಕ್ಷಣದ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯಪಾಲರು

ಪಟೇಲ್ ಟ್ರಸ್ಟ್‌ನ ಅಧ್ಯಕ್ಷ ಬದ್ರುದ್ದೀನ್ ಪಟೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟೇಲ್ ಟ್ರಸ್ಟ್‌ನ ಸಲಹಾ ಸದಸ್ಯರುಗಳಾದ ಹಾಜಿ ಅಹಮದ್‌ ಪಟೇಲ್, ಅಬ್ದುಲ್ ಖಾದ‌ರ್ ಪಟೇಲ್, ಅಬ್ದುಲ್ ರಹಿಮಾನ್ ಪಟೇಲ್, ಹಾಜಿ ಮಹಮ್ಮದ್ ಕುನ್ಹಿ, ಹಾಜಿ ಷರೀಫ್ ಪಟೇಲ್, ಅನ್ವರ್ ಪಟೇಲ್, ಪಟೇಲ್ ಟ್ರಸ್ಟ್‌ನ ಸದಸ್ಯರಾದ ಸಾಬಿತ್, ಅದ್ನಾನ್, ಮೌಶುಕ್, ಹಸೀಬ್ ಶಾಹಿದ್, ಶಾಹ್, ಹನ್ಸಿಬ್ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X