ಚಿಕ್ಕಮಗಳೂರು | ತಪ್ಪಿದ ಕೈ ಟಿಕೆಟ್‌; ಬಂಡಾಯ ಅಭ್ಯರ್ಥಿಯಾಗಿ ಗೋಪಿಕೃಷ್ಣ ಕಣಕ್ಕೆ

Date:

  • ಟಿಕೆಟ್‌ ತಪ್ಪಲು ಸಿದ್ದರಾಮಯ್ಯ ಕಾರಣ; ಗೋಪಿಕೃಷ್ಣ ಆರೋಪ
  • ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುವುದಾಗಿ ಹೇಳಿದ್ದರು

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡ ಎಚ್.ಐ ಗೋಪಿಕೃಷ್ಣ ಬಂಡಾಯವೆದ್ದಿದ್ದು, ಕೈ ಅಭ್ಯರ್ಥಿ ಶ್ರೀನಿವಾಸ್ ವಿರುದ್ಧ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿರುವ ಮಾಜಿ ಶಾಸಕ ಎಸ್.ಎಂ ನಾಗರಾಜ್ ಅವರ ನಿವಾಸದಲ್ಲಿ ಮಾಜಿ ಶಾಸಕ ಟಿ.ಎಚ್‌ ಶಿವಶಂಕರಪ್ಪ, ಗೋಪಿಕೃಷ್ಣ ಹಾಗೂ 10 ಮಂದಿ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಸಭೆ ನಡೆಸಿದ್ದಾರೆ. ಎಚ್.ಐ ಗೋಪಿಕೃಷ್ಣ ಅವರನ್ನು ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ 13 ಮಂದಿ ಅರ್ಜಿ ಹಾಕಿದ್ದರು. 13 ಆಕ್ಷಾಂಕಿಗಳಲ್ಲಿ ಅಂತಿಮವಾಗಿ ಮಾಜಿ ಶಾಸಕ ಶ್ರೀನಿವಾಸ್‌ಗೆ ಕಾಂಗ್ರೆಸ್‌ ಟಿಕೆಟ್ ನೀಡದ್ದು, ಉಳಿದ ಆಕ್ಷಾಂಕಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ 13 ಮಂದಿ ಆಕ್ಷಾಂಕಿಗಳಲ್ಲಿ 10 ಮಂದಿ ಆಕ್ಷಾಂಕಿಗಳು ಬಂಡಾಯದ ಸಭೆ ನಡೆಸಿ ಅಭ್ಯರ್ಥಿ ವಿರುದ್ದ ಕಿಡಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ಮಾಜಿ ಶಾಸಕ ಎಸ್.ಎಂ ನಾಗರಾಜ್ ಮಾತನಾಡಿ, “ಮೇ 10ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಕ್ಷೇತ್ರದಿಂದ 13 ಮಂದಿ ಅರ್ಜಿ ಸಲ್ಲಿಸಿದ್ದು, ಶ್ರೀನಿವಾಸ್ ಹೊರತುಪಡಿಸಿ ಯಾರಿಗಾದರೂ ಟಿಕೆಟ್ ಕೊಡುವಂತೆ ಹೇಳಿದ್ದೆವು. ಆದರೂ, ಹೈಕಮಾಂಡ್ ನಮ್ಮನ್ನು ಕಡೆಗಣಿಸಿ, ಅವರಿಗೆ ಟಿಕೆಟ್ ನೀಡಿರುವುದು ನಮ್ಮೆಲ್ಲರಿಗೂ ಬೇಸರ ತರಿಸಿದೆ” ಎಂದಿದ್ದಾರೆ.

“ಹಾಗಾಗಿ, ಗೋಪಿಕೃಷ್ಣ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ. ಎಲ್ಲರೂ ಬೆಂಬಲ ನೀಡಿ, ಅತಿ ಹೆಚ್ಚಿನ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದೇವೆ. ಪಕ್ಷ ಇದೀಗ ಟಿಕೆಟ್ ನೀಡಿರುವ  ಶ್ರೀನಿವಾಸ್ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ನನ್ನ ಹಾಗೂ ಪಕ್ಷದ ವಿರುದ್ಧ ಕೆಲಸ ಮಾಡಿದ್ದರು. ಆದರೂ, ಪಕ್ಷ ಅವರಿಗೆ ಅವಕಾಶ ಮಾಡಿಕೊಟ್ಟಿರುವುದು ಪಕ್ಷ ಕಟ್ಟಿ ಬೆಳೆಸಿದವರಿಗೆ ನೋವುಂಟ ಮಾಡಿದೆ. ಆದರಿಂದ, ಬಂಡಾಯ ಅಭ್ಯರ್ಥಿಯನ್ನು ಕಣಕ್ಕಳಿಸಲು ಎಲ್ಲ ಆಕಾಂಕ್ಷಿಗಳು ಒಟ್ಟಾಗಿ ನಿರ್ಧಾರ ಮಾಡಿದ್ದೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮದಾಸ್‌ಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ್ ಸಿಂಹ ಬರಿಗೈಲಿ ವಾಪಸ್‌

ಮಡಿವಾಳ ಸಮುದಾಯಕ್ಕೆ ತಪ್ಪಿದ ಟಿಕೆಟ್‌

ಗೋಪಿಕೃಷ್ಣ ಮಾತನಾಡಿ, “ಸಿದ್ದರಾಮಯ್ಯ ಅವರು ಎಲ್ಲ ವೇದಿಕೆಗಳಲ್ಲೂ ಮಡಿವಾಳ ಸಮುದಾಯಕ್ಕೆ ಟಿಕೆಟ್ ನೀಡುತ್ತೇನೆ ಎಂದು ಹೇಳಿಕೊಂಡು ಬರುದ ಮೂಲಕ ಆಸೆ ತೋರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಹ ನನಗೆ ಟಿಕೆಟ್ ನೀಡಲು ಸಾಕಷ್ಟು ಪ್ರಯತ್ನ ಪಟ್ಟರು. ಸಿದ್ದರಾಮಯ್ಯರಿಗೆ ನನಗೆ ಟಿಕೆಟ್ ನೀಡುವ ಮನಸ್ಸಿದರೂ ಬೈರತಿ ಸುರೇಶ್ ಮಾತಿಗೆ ಕಟ್ಟುಬಿದ್ದು, ಟಿಕೆಟ್ ತಪ್ಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...