ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಐದು ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಆದೇಶ ಹೊರಡಿಸಿದ್ದಾರೆ.
ಪೊಲೀಸ್ ಇಲಾಖೆ, ಬಿಬಿಎಂಪಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅರಣ್ಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳನ್ನು ಬಿಬಿಎಂಪಿ ವ್ಯಾಪ್ತಿಯ ಐದು ಕ್ಷೇತ್ರಗಳಿಗೆ ಇದೀಗ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದ ಜಿಲ್ಲಾಡಳಿತ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.