ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ದಿವಗಂತ ಕೆ ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಲೋಕಸಭಾ ಚುನಾವಣೆ ಕೆಲವು ದಿನಗಳು ಇರುವ ಮುನ್ನವೆ ಬಿಜೆಪಿಗೆ ಸೇರಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್, “ಇಂದು ಕೇರಳದ ಮುಖ್ಯ ಗೌರವಾನ್ವಿತ ಕಾಂಗ್ರೆಸ್ ನಾಯಕರಾದ ಮಾಜಿ ಮುಖ್ಯಮಂತ್ರಿ ಕರುಣಾಕರನ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ಸಂಸದ ಕೆ ಮುರುಳೀಥರನ್ ಅವರ ಸಹೋದರಿ ಪದ್ಮಜಾ ವೇಣು ಗೋಪಾಲ್ ಅವರನ್ನು ಕೇರಳದ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅವರ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!
ಇದಕ್ಕೂ ಮುನ್ನ ಪದ್ಮಜಾ ಅವರ ಸಹೋದರ ಕಾಂಗ್ರೆಸ್ ಸಂಸದ ಕೆ ಮುರಳೀಥರನ್ ಅವರು ಮಾತನಾಡಿ, ಆಕೆಯ ನಿರ್ಧಾರ ವಿಶ್ವಾಸದ್ರೋಹವಾಗಿದೆ. ಇದರಿಂದ ಬಿಜೆಪಿಗೆ ಒಂದಿಷ್ಟು ಉಪಯೋಗವಾಗುವುದಿಲ್ಲ. ಕರುಣಾಕರನ್ ಅವರು ಕೋಮುವಾದಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಂಡಿರಲಿಲ್ಲ. ಇಂತಹ ಕುಟುಂಬದ ಸದಸ್ಯರೊಬ್ಬರು ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ಜಾತ್ಯಾತೀತ ಮನೋಭಾವ ಹೊಂದಿರುವ ಜನರ ಭಾವನೆಗಳಿಗೆ ನೋವಾಗಿದೆ” ಎಂದು ಹೇಳಿದ್ದಾರೆ.
ಕೇರಳ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲ 20 ಸ್ಥಾನ ಗೆಲ್ಲಲು ಶ್ರಮಿಸಲಿದೆ. ಕಾಂಗ್ರೆಸ್ ಪಕ್ಷ ಆಕೆಗೆ ಯಾವಾಗಲು ಹೆಚ್ಚಿನ ಪ್ರಾಮುಖ್ಯತೆ ನೀಡಿತ್ತು. ಬಿಜೆಪಿ ಆಕೆಯ ಸೇರ್ಪಡೆಯಿಂದ ಯಾವುದೇ ಪ್ರಯೋಜನ ಪಡೆಯುವುದಿಲ್ಲ” ಎಂದು ಮುರುಳೀಥರನ್ ತಿಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕೇರಳದಿಂದ ರಾಹುಲ್ ಗಾಂಧಿ ಸೇರಿ 15 ಕಾಂಗ್ರೆಸ್ ಸದಸ್ಯರು ಗೆಲುವು ಸಾಧಿಸಿದ್ದರು.
