ಇಂದು (ಮಾರ್ಚ್ 8) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆಯರನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್ ಬೆಲೆ ಕಡಿತಗೊಳಿಸಲು ಮುಂದಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂ. ಇಳಿಕೆ ಇಳಿಕೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, “ಬೆಲೆ ಕಡಿತವು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ, ವಿಶೇಷವಾಗಿ, ‘ನಾರಿ ಶಕ್ತಿ’ಗೆ ಪ್ರಯೋಜನ ನೀಡುತ್ತದೆ” ಎಂದು ಹೇಳಿದ್ದಾರೆ.
“ಅಡುಗೆ ಅನಿಲವನ್ನು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸುವ ಗುರಿ ಹೊಂದಿದ್ದೇವೆ. ಇದು ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಜೀವನ ಸೌಕರ್ಯವನ್ನು ಖಾತರಿಪಡಿಸುವ ನಮ್ಮ ಬದ್ಧತೆಯನ್ನು ಭಾಗವಾಗಿದೆ” ಹೇಳಿದ್ದಾರೆ.
ಉಜ್ವಲ ಯೋಜನೆಯಡಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಗೆ 300 ರೂಪಾಯಿಗಳನ್ನು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಹೊಸ ಆರ್ಥಿಕ ವರ್ಷಕ್ಕೆ ವಿಸ್ತರಿಸುವುದಾಗಿ ಸರ್ಕಾರ ಗುರುವಾರ ಪ್ರಕಟಿಸಿದೆ.
ಸದ್ಯ ಬೆಂಗಳೂರಿನಲ್ಲಿ ಅಡುಗೆ ಅನಿಲದ ಸಿಲಿಂಡರ್ ಬೆಲೆ 1050 ರೂ. ಇದೆ. ಅಲ್ಲದೆ, ಉಜ್ವಲ ಯೋಜನೆಯಡಿ ನೀಡಲಾಗುತ್ತಿರುವ 300 ರೂ. ಸಬ್ಸಿಡಿಯು ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಆ ಸಬ್ಸಿಡಿ ಮುಂದಿನ ವರ್ಷಕ್ಕೂ ಮುಂದುವರೆಸುವುದಾಗಿ ಕೇಂದ್ರ ಹೇಳಿದೆ
ಕಳೆದ ನಾಲ್ಕೈದು ವರ್ಷಗಳಿಂದ ಗ್ಯಾಸ್ ಸಿಲಿಂಡರ್ ದರ ಮೂರು ಪಟ್ಟು ಏರಿಸಿ ಗೃಹಿಣಿಯರ ರಕ್ತ ಕುಡಿದು ಈಗ ಮೂಗಿಗೆ ತುಪ್ಪ ಸವರಿದ್ದಾರೆ,, ಚುನಾವಣೆ ಲಾಭಕ್ಕಾಗಿ ಏನು ಬೇಕಾದ್ರೂ ಮಾಡುವರು