ನಾಯಕ ರೋಹಿತ್ ಶರ್ಮಾ ಹಾಗೂ ಉದಯೋನ್ಮುಖ ಆಟಗಾರ ಶುಭಮನ್ ಗಿಲ್ ಅವರ ಭರ್ಜರಿ ಶತಕದೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ 68 ರನ್‌ಗಳ ಮುನ್ನಡೆ ಸಾಧಿಸಿದೆ.
ಹಿಮಾಚಲ ಪ್ರದೇಶದ ಧರ್ಮಶಾಲದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದಾಟದಲ್ಲಿ ಟಿಂ ಇಂಡಿಯಾ ಭೋಜನ ವಿರಾಮದ ವೇಳೆಗೆ 65 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 290 ರನ್ ಪೇರಿಸಿದೆ. ಎರಡನೇ ವಿಕೆಟ್ ಜೊತೆಯಾಟದಲ್ಲಿ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ 164 ರನ್‌ಗಳ ಜೊತೆಯಾಟವಾಡಿದರು.
ರೋಹಿತ್ ಶರ್ಮಾ 161 ಚೆಂಡುಗಳಲ್ಲಿ 101 ರನ್‌ಗಳೊಂದಿಗೆ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ 12ನೇ ಶತಕ ಗಳಿಸಿದರು. ರೋಹಿತ್ ಅವರ ಸೊಗಸಾದ ಆಟದಲ್ಲಿ 13 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ಗಳಿದ್ದವು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೋರ್ಡ್ ಪರೀಕ್ಷೆ ರದ್ದು ಸ್ವಾಗತಾರ್ಹ; ಮೇಲ್ಮನವಿಗೆ ಹೋಗದಿರಲಿ ಸರ್ಕಾರ
ನಾಯಕನಿಗೆ ಜೊತೆ ನೀಡಿದ ಶುಭಮನ್‌ಗಿಲ್ ತಮ್ಮ ಟೆಸ್ಟ್ ವೃತ್ತಿ ಜೀವನದ 4ನೇ ಶತಕ ಪೂರೈಸಿದರು. 150 ಎಸೆತಗಳನ್ನು ಎದುರಿಸಿದ ಅವರು 12 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿದರು.
103 ರನ್ ಗಳಿಸಿದ ರೋಹಿತ್ ನಾಯಕ ಬೆನ್ ಸ್ಟೋಕ್ಸ್ ಬೌಲಿಂಗ್‌ನಲ್ಲಿ ಔಟಾದರು. ಶುಭಮನ್ ಗಿಲ್ ಆಂಡರ್‌ಸನ್ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಕರ್ನಾಟಕದ ಆಟಗಾರ ದೇವದತ್ ಪಡೀಕಲ್(4) ಹಾಗೂ ಸರ್ಫರಾಜ್ ಖಾನ್ ಆಟವಾಡುತ್ತಿದ್ದಾರೆ.
ರೋಹಿತ್ ಹಲವು ದಾಖಲೆಗಳು
ಟೆಸ್ಟ್ ಮಾದರಿಯಲ್ಲಿ 12ನೇ ಶತಕಗಳನ್ನು ಪೇರಿಸಿರುವ ನಾಯಕ ರೋಹಿತ್ ಹಲವು ದಾಖಲೆಗಳನ್ನು ತಮ್ಮ ಮಡಿಲಿಗೆ ಸೇರಿಸಿಕೊಂಡರು. ಇಂಗ್ಲೆಂಡ್ ಪರ ಆರಂಭಿಕ ಆಟಗಾರನಾಗಿ 4 ಶತಕ ಗಳಿಸಿ ಸುನಿಲ್ ಗವಾಸ್ಕರ್ ದಾಖಲೆಯನ್ನು ಸರಿಗಟ್ಟಿದರು.
ಆರಂಭಿಕ ಆಟಗಾರನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 43 ಶತಕ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಮೊದಲೆರಡು ಸ್ಥಾನದಲ್ಲಿ ಡೇವಿಡ್ ವಾರ್ನರ್(49) ಹಾಗೂ ಸಚಿನ್ ತೆಂಡೂಲ್ಕರ್(45) ಇದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ಸಂಕ್ಷಿಪ್ತ ಸ್ಕೋರ್
ಇಂಗ್ಲೆಂಡ್ ಮೊದಲ ಇನಿಂಗ್ಸ್ 218
ಭಾರತ ಮೊದಲ ಇನಿಂಗ್ಸ್ 290/3
