ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎನ್‌ಐಎ ಮತ್ತು ಸಿಸಿಬಿ ಅಧಿಕಾರಿಗಳು ಆರೋಪಿ ಪತ್ತೆಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಅಲ್ಲದೇ, ಆರೋಪಿಯನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ಬಹುಮಾನ ಕೊಡುವುದಾಗಿ ಘೋಷಿಸಿದ್ದಾರೆ. ಈ ನಡುವೆ, ಶಂಕಿತ ಆರೋಪಿ ಬಿಎಂಟಿಸಿ ಬಸ್ ಹಾಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಟ ನಡೆಸಿರುವ ವಿಡಿಯೊವನ್ನು ಎನ್‌ಐಎ ಬಿಡುಗಡೆ ಮಾಡಿದೆ.
ಬಿಎಂಟಿಇ ಬಸ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್, ಮಾಸ್ಕ್ ಹಾಗೂ ಕನ್ನಡಕ ಧರಿಸಿರುವ ಆರೋಪಿಯು ಬಸ್‌ನಲ್ಲಿ ಕುಳಿತು ಪ್ರಯಾಣಿಸುತ್ತಿರುವ ದೃಶ್ಯ ಸೆರೆಯಾಗಿದೆ.
ಇನ್ನೊಂದು ವಿಡಿಯೋದಲ್ಲಿ ಶಂಕಿತ ತುಮಕೂರು ಮೂಲಕ ಬಳ್ಳಾರಿಗೆ ತೆರಳಿರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅಲ್ಲಿಂದ ಬೀದರ್ನತ್ತ ಹೊರಟಿರುವುದಾಗಿ ಮಾಹಿತಿ ದೊರೆತಿತ್ತು. ಅದರಂತೆ, ಇದೀಗ ಬಾಂಬರ್ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಓಡಾಡಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
#WATCH | NIA releases a video of the suspect linked to the Bengaluru’s Rameshwaram Cafe blast case, seeks citizens’ help in ascertaining his identity
(Video source: NIA) pic.twitter.com/QVVJfy23ZN
— ANI (@ANI) March 8, 2024
ಮಾರ್ಚ 1ನೇ ತಾರೀಖು ರಾತ್ರಿ ಒಂಬತ್ತು ಗಂಟೆಗೆ ಬಸ್ ನಿಲ್ದಾಣದಲ್ಲಿ ಓಡಾಡಿರುವ ಬಾಂಬರ್, ಮುಖಕ್ಕೆ ಮಾಸ್ಕ್ ಹಾಕಿ, ಲೈಟ್ ಬ್ಲೂ ಕಲರ್ ಟಿ ಶರ್ಟ, ಬ್ಲಾಕ್ ಪ್ಯಾಂಟ್ ಹಾಕಿಕೊಂಡು ಓಡಾಡಿದ್ದಾನೆ.
ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಮಸ್ಯೆ ಬಗೆಹರಿಸಲು ವಾರ್ಡ್‌ವಾರು ನೋಡಲ್ ಅಧಿಕಾರಿ ನೇಮಕ
ಶಂಕಿತನ ಸುಳಿವು ಲಭಿಸಿದ ಕೂಡಲೇ 080 29510900, 8904241100 ಹಾಗೂ ಇ–ಮೇಲ್ ವಿಳಾಸ info.blr.nia@gov.inಗೆ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.
ಕೆಫೆ ಬಾಂಬರ್ ನ ಪತ್ತೆಗಾಗಿ 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆ ನಡೆಸಲಾಗಿದೆ. 10 ಲಕ್ಷ ಬಹುಮಾನ ಘೋಷಿಸಲಾಗಿದೆ. ಶಂಕಿತನ ರೇಖಾಚಿತ್ರ ಸಿದ್ಧಪಡಿಸಲಾಗಿದೆ. ಸಿಸಿಬಿ, ಎನ್‌ಐಎ ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.