ದಕ್ಷಿಣ ಕನ್ನಡ | ಮಹಿಳಾ ದಿನಾಚರಣೆ; ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಿಂದ ‘ಗೃಹಲಕ್ಷ್ಮಿ’

Date:

Advertisements

ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಗೆ ಮಾತ್ರ ಸೀಮಿತಿವಾಗಿದ್ದರು. ಆದರೆ ಇಂದು ಮಹಿಳೆಯರು ಪ್ರತಿ ರಂಗದಲ್ಲಿಯೂ ಗುರುತಿಸಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಖ್ಯವಾಹಿನಿಗೆ ಬಂದರೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಗೃಹೋತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ‘ಗೃಹಲಕ್ಷ್ಮೀ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾಜಿ ಶಾಸಕ ಜೆ ಆರ್ ಲೋಬೊ ಮಾತನಾಡಿ, “ಪುರುಷರ ಜತೆ ಮಹಿಳೆಯರಿದ್ದರೆ ಮಾತ್ರ ಸಮಾಜ ಅಭಿವೃದ್ಧಿಯಾಗಲು ಸಾಧ್ಯ. ಮಹಿಳೆಯರಿಗೆ ಪ್ರಾತಿನಿಧ್ಯ ಇರುವ ಕಡೆಗಳಲ್ಲಿ ಅಭಿವೃದ್ಧಿ ಕಂಡಿದೆ. ಮಣಿಪುರ ಘಟನೆ ಇಡೀ ದೇಶವನ್ನು ತಲೆತಗ್ಗಿಸುಂತೆ ಮಾಡಿದೆ. ಅಲ್ಲಿನ ಮಹಿಳೆಯರನ್ನು ಭೇಟಿ ಮಾಡಿ ಧೈರ್ಯ ತುಂಬುವ ಕೆಲಸವನ್ನು ಜವಾಬ್ದಾರಿಯುತ ಪ್ರಧಾನಿಯವರು ಮಾಡಿಲ್ಲ. ಇದು ದೇಶದ ದುರಂತ.ಪ್ರಧಾನಿಯವರ ‘ಬೇಟಿ ಬಚಾವೋ ಬೇಟಿ ಪಡಾವೋ’ ಇದೇನಾ” ಎಂದು ಪ್ರಶ್ನಿಸಿದರು.

Advertisements

ಲಯನ್ಸ್ ಮಂದಿರದ ಒಳ-ಹೊರಗೆ ಹಾಕಲಾಗಿದ್ದ ಮಳಿಗೆಗಳಲ್ಲಿ ಮಹಿಳಾ ಗೃಹ ಉದ್ಯಮಿಗಳು ತಮ್ಮ ಗೃಹ ಉತ್ಪನ್ನಗಳನ್ನು ಮಾರಾಟ ಮಾಡಿ ಗಮನ ಸೆಳೆದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

ಪ್ರಸನ್ನ ಮಂಜುನಾಥ್ ಭಂಡಾರಿ ಹಾಗೂ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮುಡಾದ ಅಧ್ಯಕ್ಷ ಸದಾಶಿವ್ ಉಳ್ಳಾಲ್, ಗೇರು ನಿಮಗದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಲಕ್ಷ್ಮಿ ನಾಯ‌ರ್, ಜೊಸ್ಪಿನ್ ಡಿಸೋಜ, ಲೋಕೇಶ್ವರಿ ಗೌಡ, ಸುಹಾಸಿನಿ, ಶೈಲಾ ರಮಾನಾಥ್ ರೈ, ಮಲ್ಲಿಕಾ ಪಕ್ಕಳ ಸೇರಿದಂತೆ ಇತರರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X