- ಐವರು ನ್ಯಾಯಮೂರ್ತಿಗಳ ಪೀಠದಿಂದ ಅರ್ಜಿ ವಿಚಾರಣೆ
- ಸಲಿಂಗ ಮದುವೆ ಮಾನ್ಯತೆ ಕೋರಿರುವ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದ ಕೇಂದ್ರ
ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ತೀರ್ಪು ನೀಡದೇ ಹಿಂದಕ್ಕೆ ಸರಿಯಬೇಕು ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ.
ಸಲಿಂಗ ಮದುವೆಗೆ ಶಾಸನ ಮಾನ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಕೆಲವರು ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡಿತ್ತು.
ವಿಚಾರಣೆ ವೇಳೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ, “ಸಲಿಂಗ ಮದುವೆಯು ಇತ್ತೀಚಿನ ದಿನಗಳಲ್ಲಿ ಮಹಾ ನಗರಗಳಲ್ಲಿ ವಾಸಿಸುತ್ತಿರುವ ಕೆಲವು ವರ್ಗಗಳ ಜನರ ಮನಃಸ್ಥಿತಿಯಾಗಿದೆ. ಆದ್ದರಿಂದ ಇಂತಹ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು” ಎಂದು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಈ ಸುದ್ದಿ ಓದಿದ್ದೀರಾ? : ಈ ದಿನ ಸಂಪಾದಕೀಯ | ಕೇಡಿನ ಕಾಲದ ದಿಟ್ಟ ದನಿಗಳು, ಈ ನ್ಯಾಯಮೂರ್ತಿಗಳು
“ಹಲವು ವ್ಯಕ್ತಿಗಳು ಸಲ್ಲಿಸಿರುವ ಅರ್ಜಿಗಳು ವಿಚಾರಣೆಗೇ ಅರ್ಹವಾಗಿಲ್ಲ. ಕೆಲವರು ಸಾಮಾಜಿಕ ಸ್ವೀಕೃತಿ ಪಡೆದುಕೊಳ್ಳುವ ಉದ್ದೇಶದಿಂದ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ” ಎಂದು ಕೇಂದ್ರ ಸರ್ಕಾರ ವಾದಿಸಿದೆ.
“ಒಂದು ವೇಳೆ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಿದರೆ, ದೇಶದಲ್ಲಿ ಇದುವರೆಗೂ ಮದುವೆ ವಿಚಾರವಾಗಿ ನಡೆದುಕೊಂಡು ಬಂದಿರುವ ಸಂಪ್ರದಾಯಗಳ ಮೇಲೆ ಪರಿಣಾಮ ಬೀರಿದಂತಾಗುತ್ತದೆ” ಎಂದು ಕೇಂದ್ರ ಸರ್ಕಾರ ಪ್ರಮಾಣಪತ್ರ ಸಲ್ಲಿಸಿದೆ.