ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೇ ಇರುತ್ತೆ: ‘ಟಿಕೆಟ್ ಮಿಸ್’ ಸುದ್ದಿಯ ಬೆನ್ನಲ್ಲೇ ಪ್ರತಾಪ್ ಸಿಂಹ ಹೇಳಿಕೆ

Date:

Advertisements

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವಾಗುತ್ತಿರುವಂತೆಯೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಆಯ್ಕೆ ಕಸರತ್ತಿನಲ್ಲಿ ತೊಡಗಿದೆ. ಈ ನಡುವೆ ಈ ಬಾರಿ ಬಿಜೆಪಿ ಹೈಕಮಾಂಡ್​​ ಮೈಸೂರು-ಕೊಡಗು ಕ್ಷೇತ್ರದಲ್ಲಿ ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಮೂಲಕ ಸಂಸದ ಪ್ರತಾಪ್​ ಸಿಂಹ ಅವರಿಗೆ ಟಿಕೆಟ್​ ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಈ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, “ಸಂಸದರ ಟಿಕೆಟ್ ನಿರ್ಧಾರ ಮಾಡುವವರು ಜನ. ಕೆಲಸ ನೋಡಿ ಟಿಕೆಟ್ ನೀಡುತ್ತಾರೆ. ಜನ ಖುಷಿಯಾಗಿದ್ದಾರೆ ಅಂದರೆ ಮೇಲಿನವರು ಅದೇ ನಿರ್ಧಾರ ಮಾಡ್ತಾರೆ. ಮೈಸೂರಿನಲ್ಲಿ ನಾನು ಇಂತಾ ಕೆಲಸ ಮಾಡಿಲ್ಲ ಎಂದು ಜನ ಹೇಳಲಿ. ಯಾರೋ ಒಂದಷ್ಟು ಜನ ಅಸೂಯೆಗೆ ಮಾತನಾಡುತ್ತಾರೆ. ಕಾಯಲು ಬೆಟ್ಟದ ಮೇಲೆ ಒಬ್ಬಳು ತಾಯಿ (ಚಾಮುಂಡೇಶ್ವರಿ) ಇದ್ದಾಳೆ. ರಾಜಕೀಯದಲ್ಲಿ ದ್ವೇಷ-ಅಸೂಯೆ ಇದ್ದೇ ಇರುತ್ತದೆ” ಎಂದು ಹೇಳಿಕೆ ನೀಡಿದ್ದು, ಟಿಕೆಟ್ ಮಿಸ್ ಆಗುವ ಮುನ್ಸೂಚನೆ ಇರುವಂತೆ ಮಾತನಾಡಿದ್ದಾರೆ.

“ಪತ್ರಕರ್ತನಾಗಿದ್ದವನನ್ನು ಎರಡು ಬಾರಿ ಸಂಸದನನ್ನಾಗಿ ಮಾಡಿದ್ದು ಬಿಜೆಪಿ. ಕಾಂಗ್ರೆಸ್‌ನವರಿಗೆ ಅಭ್ಯರ್ಥಿ ಹುಡುಕಲು ಆಗ್ತಾ ಇಲ್ಲ. ಇದರಿಂದ ಪ್ರತಾಪ್ ಸಿಂಹ ಶಕ್ತಿ ಏನು ಅಂತಾ ಕಾಂಗ್ರೆಸ್ ಅವರಿಗೆ ಗೊತ್ತಿದೆ. ನಾನು ಗೆದ್ದರೆ ಸಿದ್ದರಾಮಯ್ಯ ಅವರ ಸೀಟು ಅಲುಗಾಡುತ್ತದೆ. ಪ್ರತಾಪ್ ಸಿಂಹ ಸೋಲಿಸಲು ಆಗಲ್ಲ ಎಂದು ಕಾಂಗ್ರೆಸ್‌ಗೆ ಗೊತ್ತಿದೆ” ಎಂದು ತಿಳಿಸಿದ್ದಾರೆ.

Advertisements

ವಿಜಯೇಂದ್ರ ಹೇಳಿದ್ದೇನು?

ಪ್ರತಾಪ್​ ಸಿಂಹ ಅವರಿಗೆ ಟಿಕೆಟ್​ ಸಿಗುವುದು ಅನುಮಾನದ ಬಗ್ಗೆ ಪತ್ರಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಲ್ಲಿ ಪ್ರಶ್ನಿಸಿದಾಗ, “ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಆಗಿರುವುದನ್ನು ನಾನು ಹೇಳಲ್ಲ. ಆದರೆ, 28 ಕ್ಷೇತ್ರಗಳಿಗೆ ಉತ್ತಮ ಅಭ್ಯರ್ಥಿ ಕೊಡುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಚಂಡೀಗಢ ಮೇಯರ್ | ಬಿಜೆಪಿಗೆ ಮತ್ತೆ ಠಕ್ಕರ್ ನೀಡಿದ ಆಪ್: ಪಕ್ಷ ಬಿಟ್ಟಿದ್ದ ಮೂವರ ಪೈಕಿ ಇಬ್ಬರಿಂದ ‘ಘರ್ ವಾಪ್ಸಿ’

“3-4 ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ನರೇಂದ್ರ ಮೋದಿಯವರ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ. ನರೇಂದ್ರ ಮೋದಿ ನಾಯಕತ್ವ ಉತ್ತಮ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಆಯ್ಕೆ ಮುಂದುವರಿದಿದೆ. ಮುಂದಿನ 3-4 ದಿನಗಳಲ್ಲಿ ಅಭ್ಯರ್ಥಿ ಅಯ್ಕೆ ಅಂತಿಮಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X