ನೌಕಾನೆಲೆಯ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರ ಶೆಡ್ನಲ್ಲಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾದಲ್ಲಿ ನಡೆದಿದೆ.
ಮುದಗಾ ಬಳಿ ನೌಕಾನೆಲೆಯ ಎರಡನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯ ಗುತ್ತಿಗೆ ಪಡೆದಿರುವ ಎನ್‌ಸಿಸಿ ಕಂಪನಿಯ ಕಾರ್ಮಿಕರು ಮುದಗಾ ಕಾಲೋನಿಯಲ್ಲಿ ತಂಗಿದ್ದಾರೆ. ಭಾನುವಾರ ಬೆಳಗ್ಗೆ ಕಾರ್ಮಿಕರು ಅಡುಗೆ ಮಾಡುತ್ತಿದ್ದ ಸಮಯದಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ.
ಕಾಲೋನಿಯಲ್ಲಿ 600ಕ್ಕೂ ಹೆಚ್ಚು ಕಾರ್ಮಿಕರು ಸುಮಾರು 150ಕ್ಕೂ ಹೆಚ್ಚು ತಗಡಿನ ಶೆಡ್‌ಗಳಲ್ಲಿ ವಾಸವಾಗಿದ್ದಾರೆ. ಶೆಡ್ ಒಂದರಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಅ ಶೆಡ್ ಸಂಪೂರ್ಣ ಹಾಳಾಗಿದೆ.
ಅಕ್ಕಪಕ್ಕದಲ್ಲಿದ್ದ ಐದಾರು ಶೆಡ್‌ಗಳಿಗೂ ಬೆಂಕಿ ತಲುಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಸಿಲಿಂಡರ್ ಸ್ಫೋಟಿಸಿದಾಗ, ಸ್ಥಳದಲ್ಲಿ ಯಾವುದೇ ಕಾರ್ಮಿಕರು ಇರಲಿಲ್ಲವಾದ್ದರಿಂದ, ಯಾರಿಗೂ ಅಪಾಯವಾಗಿಲ್ಲ ಎಂದು ವರದಿಯಾಗಿದೆ.