ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಯೂನಿಟಿ ಹಾಲ್‌ನಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ, ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭಿಗಳ ಬೃಹತ್ ಸಮಾವೇಶ ನಡೆದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಜಿ.ಪಂ ಸಿಇಒ ಡಾ. ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಸಹಾಯಕ ಆಯುಕ್ತ ಹರ್ಷವರ್ಧನ್, ತಹಸೀಲ್ದಾರ್ ಪುಟ್ಟ ರಾಜು, ಉಲ್ಲಾಳ ಪೌರಾಯುಕ್ತ ವಾಣಿ ಆಳ್ವ ಸಿಡಿಪಿಒ ಶೈಲಾ ವೇದಿಕೆಯಲ್ಲಿದ್ದರು.
ಸಹಾಯಕ ಆಯುಕ್ತ ಹರ್ಷವರ್ಧನ್ ಸ್ವಾಗತಿಸಿದರು. ಉಲ್ಲಾಳ ಪೌರಾಯುಕ್ತ ವಾಣಿ ಆಳ್ವ ವಂದಿಸಿದರು. ಸರ್ಕಾರದ ಐದು ಯೋಜನೆಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.