ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ಜಾಥಾ ಕಾರ್ಯಕ್ರಮಗಳು ನಡೆಯುತ್ತಿವೆ. ಜಿಲ್ಲೆಯಲ್ಲಿಯೂ ಜಾಗೃತಿ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತದೆ. ವ್ಯಸನ ಮುಕ್ತ, ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಎಲ್ಲರ ಸಹಕಾರ ಅವಶ್ಯಕವಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಹೇಳಿದರು.
ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ವಾಕ್‌ಥಾನ್‌ಗೆ ಚಾಲನೆ ನೀಡಿ ಮಾತನಾಡಿದರು.
“ಸಾರ್ವಜನಿಕರು ಮುಕ್ತವಾಗಿ ಪೊಲೀಸರಿಗೆ ಮಾಹಿತಿ ನೀಡುವ ಮೂಲಕ ಅಪರಾಧ ತಡೆಯಲು ಸಹಕರಿಸಬೇಕು” ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪೊಲೀಸ್ ಮೈದಾನದಿಂದ ಪ್ರಾರಂಭವಾದ ಜಾಗೃತಿ ಜಾಥಾ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೆ ನಡೆಯಿತು.
ಈ ಸುದ್ದಿ ಓದಿದ್ದೀರಾ? ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಸತ್ಯನಾರಾಯಣ, ಸಿಪಿಐ ಉಮೇಶ ಕಾಂಬ್ಳೆ ಸೇರಿದಂತೆ ನಗರದ ವಿವಿಧ ಠಾಣೆಗಳ ಸಿಪಿಐ, ಪಿಎಸ್‌ಐ, ಸ್ವಯಂಸೇವಾ ಸಂಸ್ಥೆಗಗಳ ಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.
ವರದಿ : ಹಫೀಜುಲ್ಲ
