ದಕ್ಷಿಣ ಕನ್ನಡ | ಲಾರಿ-ಕಾರಿಗೆ ಢಿಕ್ಕಿ; ಒಂದೇ ಕುಟುಂಬದ ನಾಲ್ವರಿಗೆ ಗಾಯ

Date:

Advertisements

ನಿಲ್ಲಿಸಿದ್ದ ಗೂಡ್ಸ್ ಲಾರಿಯೊಂದಕ್ಕೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಕೂರ್ನಡ್ಕ ಮರೀಲ್ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಬಳಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ಕಾಸರಗೋಡು ಪೈವಳಿಕೆ ಗ್ರಾಮದ ಸುಳ್ಳಿಮಲೆ ಎಂಬಲ್ಲಿನ ನಿವಾಸಿಗಳಾದ ಕೃಷ್ಣಪ್ಪ ನಾಯ್ಕ(60), ಅವರ ಪತ್ನಿ ಗುಲಾಬಿ(55), ಪುತ್ರಿ ರೋಹಿಣಿ(32) ಮತ್ತು ಮೊಮ್ಮಗಳು ಗನ್ಯ(2) ಗಾಯಗೊಂಡವರು.

ಪುತ್ತೂರಿನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿಯಲ್ಲಿ ಇವರು ಪ್ರಯಾಣಿಸುತ್ತಿದ್ದ ಕಾರು ಸಂಚರಿಸುತ್ತಿದ್ದ ಸಂದರ್ಭ ಮುಂಭಾಗದಿಂದ ಬೈಕೊಂದು ಆಗಮಿಸಿದ್ದು, ಬೈಕ್‍ಗೆ ಸೈಡ್ ಕೊಡುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ್ದು, ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಗೆ ಢಿಕ್ಕಿ ಹೊಡೆದಿತ್ತು. ಗಾಯಾಳುಗಳ ಪೈಕಿ ಕೃಷ್ಣಪ್ಪ ನಾಯ್ಕ ಮತ್ತು ಗುಲಾಬಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ಭರವಸೆಗಳೊಂದಿಗೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ದ: ಸಚಿವ ಬೋಸರಾಜು

ರೋಹಿಣಿ ಮತ್ತು ಗನ್ಯ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಪುತ್ತೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X