ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಭಾಗ್ಯಶ್ರೀ ನಾಯ್ಕೋಡಿ ಎಂಬ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಆಧಾರದಲ್ಲಿ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾ ಮೂಲಿಮಠ, ಅಧೀಕ್ಷಕ ಹಾಗೂ ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಫ್‌ಐಆರ್ ದಾಖಲಾದ ಬಳಿಕ ವಾರ್ಡನ್ ರೇಣುಕಾ ಅವರನ್ನು ಕರ್ತವ್ಯದಿಂದ ಬಿಡುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಹಾಸ್ಟೆಲ್ ವಾರ್ಡನ್ ಅವರ ನಿರ್ಲಕ್ಷವೇ ಕಾರಣ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದರು. ಹೀಗಾಗಿ ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೂಚಿಸಿದರು.