ಕಲಬುರಗಿಯಿಂದ ಬೆಂಗಳೂರಿಗೆ ಕೇಂದ್ರ ಸರ್ಕಾರ ನೂತನವಾಗಿ ಆರಂಭಿಸಿರುವ ನ್ಯೂ ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಯಾದಗಿರಿ ಜಿಲ್ಲೆಯಲ್ಲಿ ನಿಲ್ಲಿಸುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹಿಸಿದೆ.
ಪತ್ರಕರ್ತರೊಂದಿಗೆ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ಬಿ. ಎನ್ ವಿಶ್ವನಾಥ್ ನಾಯಕ, ಕರ್ನಾಟಕದಲ್ಲಿ ಯಾದಗಿರಿ ಜಿಲ್ಲೆಯಿಂದ ಅತಿ ಹೆಚ್ಚು ಮಂದಿ, ಬೆಂಗಳೂರು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಕಾರ್ಮಿಕರು ವಲಸೆ ಹೋಗುತ್ತಾರೆ. ಅಲ್ಲದೆ, ಇಲ್ಲಿಂದ ಸಾಕಷ್ಟು ಜನ ಬೆಂಗಳೂರಿಗೆ ದಿನನಿತ್ಯ ತೆರಳುವುದರಿಂದ ಕೆಲವೊಂದು ರೈಲು ಇಲ್ಲಿ ನಿಲ್ಲುತ್ತಿಲ್ಲ. ಎಲ್ಲ ರೈಲುಗಳನ್ನು ಸಹ ಇಲ್ಲಿ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಇಲ್ಲಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ತೇರಳುವುದರಿಂದ, ಅತಿಹೆಚ್ಚು ಆದಾಯ ನೀಡುವ ನಮ್ಮ ಯಾದಗಿರಿ ರೈಲ್ವೇ ಸ್ಟೇಷನ್ ಇದಾಗಿದೆ. ಇಲ್ಲಿಂದ ತೆರಳುವ ಕೂಲಿ ಕಾರ್ಮಿಕರಿಗೆ ಬಡ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ವಂದೇ ಭಾರತ ಎಕ್ಸ್ ಪ್ರೆಸ್ ರೈಲನ್ನು ಕಡ್ಡಾಯವಾಗಿ ಯಾದಗಿರಿಯಲ್ಲಿ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇಲ್ಲವಾದಲ್ಲಿ ಬರುವ ಸಂಸದರ ಚುಣಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ. ಅದ ಕಾರಣ ಇಲ್ಲಿನ ಜನತೆಗೆ ವಂದೇ ಭಾರತ ರೈಲನ್ನು ನಿಲ್ಲಿಸಬೇಕು ಇಲ್ಲವಾದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ರೈಲ್ವೇ ಸ್ಟೇಷನ್‌ಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.