ಬೆಂಗಳೂರು | ರೈಲ್ವೆ ಇಲಾಖೆಯಲ್ಲಿ 9,144 ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಏ.8 ಕೊನೆಯ ದಿನ

Date:

Advertisements

ರೈಲ್ವೆ ಇಲಾಖೆಯಲ್ಲಿ ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇದೇ ಮಾರ್ಚ್ 9ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಏಪ್ರಿಲ್ 8 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದ್ದು, ಈ ಕುರಿತು ರೈಲ್ವೆ ಇಲಾಖೆ ಇತ್ತೀಚೆಗೆ ಕೇಂದ್ರಿಕೃತ ಅಧಿಸೂಚನೆ ಹೊರಡಿಸಿದೆ.

‘ಟೆಕ್ನಿಷಿಯನ್ ಗ್ರೇಡ್–1’ (ಸಿಗ್ನಲ್) 1092 ಹಾಗೂ ‘ಟೆಕ್ನಿಷಿಯನ್ ಗ್ರೇಡ್–3’ 8052 ಹುದ್ದೆಗಳಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು, ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.

ಟೆಕ್ನಿಷಿಯನ್ ಗ್ರೇಡ್–1 ಹುದ್ದೆಗಳಿಗೆ ವಯೋಮಿತಿ ಕನಿಷ್ಠ 18ರಿಂದ 36, ಟೆಕ್ನಿಷಿಯನ್ ಗ್ರೇಡ್–3 ಹುದ್ದೆಗಳಿಗೆ ವಯೋಮಿತಿ ಕನಿಷ್ಠ 18ರಿಂದ 33 ಇದೆ. ಮೀಸಲು ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ, ಇತರೆ ವರ್ಗದವರಿಗೆ ₹250 ಇದೆ.

Advertisements

ಟೆಕ್ನಿಷಿಯನ್ ಗ್ರೇಡ್–1 ಹುದ್ದೆಗಳಿಗೆ ನಿಗದಿತ ವಿಷಯದೊಂದಿಗೆ ಬಿಎಸ್‌ಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಅಥವಾ ನಿಗದಿತ ವಿಷಯದಲ್ಲಿ ಎಂಜನಿಯರಿಂಗ್ ಪದವಿ ಹೊಂದಿರಬೇಕು.

ಟೆಕ್ನಿಷಿಯನ್ ಗ್ರೇಡ್–3 (ಬ್ಲ್ಯಾಕ್‌ಸ್ಮಿತ್, ಬ್ರಿಡ್ಜ್, ಕ್ಯಾರೇಜ್ ಆ್ಯಂಡ್ ವ್ಯಾಗನ್, ಕ್ರೇನ್ ಡ್ರೈವರ್, ಎಲೆಕ್ಟ್ರಿಷಿಯನ್‌) ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಜೊತೆಗೆ ನಿಗದಿತ ವಿಷಯಗಳೊಂದಿಗೆ ಐಟಿಐ ಪಾಸಾಗಿರಬೇಕು. ಕೋರ್ಸ್‌ನ ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ನೇಮಕಾತಿ ಪ್ರಕ್ರಿಯೆಯು ಮೂರು ಹಂತಗಳಲ್ಲಿ ನಡೆಯಲಿದೆ. ಮೊದಲಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ), ನಂತರ ದಾಖಲೆಗಳ ತಪಾಸಣೆ ಹಾಗೂ ಕೊನೆಯದಾಗಿ ಮೆಡಿಕಲ್ ಟೆಸ್ಟ್ ಇರಲಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ ಲೋಕಸಭಾ ಕ್ಷೇತ್ರ | ಬಿಜೆಪಿ ಕೈಯಲ್ಲಿರುವ ಕ್ಷೇತ್ರವನ್ನು ಕಾಂಗ್ರೆಸ್ ಕಸಿಯಬಲ್ಲದೇ?

ರೈಲ್ವೆ ನೇಮಕಾತಿ ಮಂಡಳಿಗಳಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಆಯಾ ರಾಜ್ಯಗಳ ಅಭ್ಯರ್ಥಿಗಳು ಸಂಬಂಧಿಸಿದ ರೈಲ್ವೆ ನೇಮಕಾತಿ ಮಂಡಳಿಯ ವೆಬ್‌ಸೈಟಿಗೆ ಹೋಗಿ (ಬೆಂಗಳೂರು–www.rrbbnc.gov.in) ಹುದ್ದೆಗಳ ವರ್ಗೀಕರಣ, ಪರೀಕ್ಷೆ ವಿಧಾನ, ಪರೀಕ್ಷೆ ಪಠ್ಯಕ್ರಮ, ಅರ್ಜಿ ಸಲ್ಲಿಕೆಗಾಗಿ ಹಾಗೂ ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ವಿವರವಾದ ಅಧಿಸೂಚನೆ (ಸಿಇಎನ್) ನೋಡಿಕೊಂಡು ಅರ್ಜಿ ಸಲ್ಲಿಸಬೇಕೆಂದು ರೈಲ್ವೆ ಇಲಾಖೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

Download Eedina App Android / iOS

X