ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮಂಗಳವಾರ (ಮಾರ್ಚ್ 12) ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಮುಖಂಡರೊಂದಿಗೆ ಅವರು ಸೋಮವಾರ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿ ಮಾಡಿದ್ದ ಅವರು, “ಕಾಂಗ್ರೆಸ್‌ನ ಪ್ರಮುಖ ನಾಯಕರುಗಳನ್ನು ಸೋಮವಾರ ಭೇಟಿಯಾಗಿ ಮಾತನಾಡಿದ್ದು, ಮಂಗಳವಾರ ಕಾಂಗ್ರೆಸ್ ಸೇರುತ್ತಿದ್ದೇನೆ. ನಾನು ಕಾಂಗ್ರೆಸ್ ಎದುರು ಯಾವುದೇ ಬೇಡಿಕೆಯಿಟ್ಟಿಲ್ಲ” ಎಂದು ತಿಳಿಸಿದ್ದಾರೆ.
ಈ ಹಿಂದೆ 2019ರ ಅವಧಿಯಲ್ಲಿ ಸುಕುಮಾರ ಶೆಟ್ಟಿ ಬೈಂದೂರಿನಲ್ಲಿ ಬಿಜೆಪಿ ಶಾಸಕರಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಆಗಿನಿಂದಲೂ ಸುಕುಮಾರ ಶೆಟ್ಟಿ ಬಿಜೆಪಿಯಲ್ಲಿ ಸಕ್ರಿಯವಾಗಿರಲಿಲ್ಲ.
ಈ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲವು ಸಚಿವರುಗಳನ್ನು ಕೂಡಾ ಅವರು ಭೇಟಿಯಾಗಿದ್ದರು. ಇದರಿಂದಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಮಾತು ಕೇಳಿಬಂದಿತ್ತು.