ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

Date:

Advertisements

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾ‌ರ್ದನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ವಿಧಾನಪರಿಷತ್‌ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. “ಬಿಜೆಪಿ ಮಾತಿಗಷ್ಟೇ ಸಿದ್ಧಾಂತವೆನ್ನುತ್ತದೆ. ಅಲ್ಲಿ ಯಾವ ತತ್ವವೂ ಇಲ್ಲ, ಸಿದ್ಧಾಂತವೂ ಇಲ್ಲ” ಎಂದು ಅಣಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಹಸು ಹೊಟ್ಟೆಯಿಂದ 15 ಕೆಜಿ ಪ್ಲಾಸ್ಟಿಕ್‌ ಹೊರತೆಗೆದ ವೈದ್ಯರು!

Advertisements

“ಈ ಹಿಂದೆ ಇಕ್ಬಾಲ್ ಅನ್ಸಾರಿಯನ್ನು ಸೋಲಿಸಲು ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಅವರನ್ನು ಬೆಂಬಲಿಸಿದ್ದೆ. ಈಗ ಗಂಗಾವತಿಯಿಂದ ಅವರಿಬ್ಬರ ಎದುರು ಫುಟ್‌ಬಾಲ್‌ ಆಡಲು ಅವಕಾಶ ಸಿಕ್ಕಿದೆ. 12 ‌ವರ್ಷಗಳ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚಿಸಲು ನಾನು ಪ್ರಮುಖ ಪಾತ್ರ ವಹಿಸಿದ್ದೆ. ಈಗ ಬಿಜೆಪಿಯಲ್ಲಿ ಇರುವವರು ತಂತ್ರ, ಕುತಂತ್ರ ಮಾಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ. ಪಕ್ಷ ನಿಷ್ಠರನ್ನು ಹೊರ ದಬ್ಬುತ್ತಾರೆ” ಎಂದು ಆರೋಪಿಸಿದರು.

ಪಕ್ಷದ ವಕ್ತಾರ ಸಂಗಮೇಶ ಬಾದವಾಡಗಿ, ತಾಲೂಕು ಘಟಕದ ಅಧ್ಯಕ್ಷ ಮಲ್ಲೇಶಪ್ಪ ಗುಮಗೇರಿ, ಮಹಾಂತೇಶ ಸಂಗಟಿ, ಅಮರೇಶ ಹೊಸಮನಿ, ಗಂಗಾಧರಯ್ಯಸ್ವಾಮಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X