ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹಾಗೂ ಇವರ ಸಂಪುಟ ಸಚಿವರು ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಮಿತ್ರಪಕ್ಷ ಜನನಾಯಕ ಜನತಾ ಪಕ್ಷದೊಂದಿಗೆ(ಜೆಜೆಪಿ) ಸೀಟು ಹಂಚಿಕೆ ಮಾತುಕತೆ ಮುರಿದುಬಿದ್ದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ.
ಮೂಲಗಳ ಪ್ರಕಾರ ಬಿಜೆಪಿ ತನ್ನ ಶಾಸಕರ ಸಭೆಯನ್ನು ಕರೆದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಯಕರ್ತರನ್ನು ಕಡೆಗಣಿಸಿದ ಬಿಜೆಪಿ ‘ಗೋ ಬ್ಯಾಕ್’ ಘೋಷಣೆಗೆ ಬೆಚ್ಚಿತೇ?
90 ಸದಸ್ಯರ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿಯ 41 ಶಾಸಕರಿದ್ದು, ಜೆಜೆಪಿಯ 10 ಶಾಸಕರಿದ್ದಾರೆ. ಇವರೊಂದಿಗೆ ಸರ್ಕಾರಕ್ಕೆ 6 ಸ್ವತಂತ್ರ ಶಾಸಕರು ಬೆಂಬಲ ನೀಡಿದ್ದರು.
ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದ್ದು, ಐಎನ್‌ಎಲ್‌ಡಿ ಹಾಗೂ ಹೆಚ್‌ಎಲ್‌ಪಿ ಪಕ್ಷದಿಂದ ತಲಾ ಒಂದು ಶಾಸಕರಿದ್ದಾರೆ.
ಬಿಜೆಪಿ ನಾಯಕ ಕನ್ವರ್ ಪಾಲ್ ಗುರ್ಜರ್ ಪ್ರಕಾರ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಮತ್ತೆ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.
