ಉಡುಪಿ | ಅನಂತ ಕುಮಾರ್ ಹೆಗಡೆ ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ: ರಮೇಶ್ ಕಾಂಚನ್

Date:

Advertisements

ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆಯವರು ಪದೇ ಪದೆ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು ಅವರ ವಿರುದ್ಧ ಬಿಜೆಪಿ ನಾಯಕರಿಗೆ ನಿಜವಾದ ದಮ್ಮು-ತಾಕತ್ತು ಇದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಸವಾಲೆಸಿದಿದ್ದಾರೆ.

ಎಲ್ಲಾ ಸಮುದಾಯದ ಜನರ ಮತವನ್ನು ಪಡೆದು ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ ಅನಂತ ಕುಮಾರ್ ಹೆಗಡೆ ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಾವಣೆ ಮಾಡುವುದಾಗಿ ದರ್ಪದ ಮಾತು ನಿಜಕ್ಕೂ ಖಂಡನೀಯ. ಪದೇ ಪದೆ ಒಬ್ಬ ಸಂಸದರಾಗಿ ಇಂತಹ ಹೇಳಿಕೆ ನೀಡುವುದು ಸಮಾಜದಲ್ಲಿ ಅಶಾಂತಿ ಮೂಡಿಸಲು ಕಾರಣವಾಗುತ್ತದೆ ಎಂದು ಕಿಡಿಕಾರಿದರು.

ಅನಂತಕುಮಾರ್ ಹೆಗಡೆ ಅವರ ಹೇಳಿಕೆಯಿಂದ ದೂರ ಇರುವುದಾಗಿ ಹೇಳಿಕೊಂಡು ಬಿಜೆಪಿ ನಾಯಕರು ಕೈತೊಳೆದುಕೊಂಡರೆ ಸಾಲುವುದಿಲ್ಲ ಬದಲಾಗಿ ಅವರನ್ನು ಪಕ್ಷದಿಂದ ಹೊರಹಾಕುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.

Advertisements

ಬಾಯಿ ಮಾತಿಗೆ ಅಂತರ ಕಾಯ್ದುಕೊಂಡಿದ್ದೇವೆ ಎನ್ನುವ ಮೂಲಕ ಮತ್ತಷ್ಟು ಮಾತನಾಡಲು ಬಿಜೆಪಿ ಪಕ್ಷ ಅವರಿಗೆ ಅವಕಾಶ ಮಾಡಿಕೊಟ್ಟು ಪರೋಕ್ಷವಾಗಿ ಅವರ ಬೆಂಬಲಕ್ಕೆ ನಿಂತಿದೆ ಎನ್ನುವ ಅನುಮಾನ ಕಾಡುತ್ತದೆ. ಸಂಸದ ಅನಂತ ಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಬಿಜೆಪಿ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕವಾಗಿದ್ದು ಇವರಿಗೆ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವನ್ನು ತೋರಿಸುತ್ತದೆ ಎಂದರು.

ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೀಡಿದ್ದಲ್ಲ. ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ. ಇವರಿಗೆ  ಅನಂತಕುಮಾರ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು ತಾಕತ್ ಇಲ್ಲ ಅಷ್ಟೇ ಎಂದು ಗುಡುಗಿದರು.

ಸಂಸದನಾಗಿ ತಮ್ಮ ಸ್ವಂತ ಕ್ಷೇತ್ರಕ್ಕೆ ನಯಾಪೈಸೆಯಷ್ಟು ಕೆಲಸವನ್ನು ಮಾಡದ ಮತ್ತು ಲೋಕಸಭೆಯಲ್ಲಿ ಬಾಯಿ ಮುಚ್ಚಿಕೊಂಡೇ ಐದು ವರ್ಷಗಳನ್ನು ಪೂರ್ಣಗೊಳಿಸಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಉತ್ತರ ಕನ್ನಡದಾದ್ಯಂತ ಜನರಲ್ಲಿ ಆಕ್ರೋಶವಿದೆ. ಇದಕ್ಕಾಗಿ ಹಿಂದುತ್ವ ಅಪಾಯದಲ್ಲಿದೆ ಎಂಬ ಹುಸಿಭೀತಿಯನ್ನು ಜನರಲ್ಲಿ ಹುಟ್ಟಿಸಿ ಕೋಮುಭಾವನೆಯನ್ನು ಕೆರಳಿಸಿ ಮತಗಳ ಧ್ರುವೀಕರಣಗೊಳಿಸುವುದು ಅವರ ಉದ್ದೇಶವಾಗಿದೆ ಎಂದರು.

ಇದೇ ರೀತಿಯ ವರ್ತನೆ ಮುಂದುವರೆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಗಡೆಯವರಿಗೆ ಟಿಕೇಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಒಂದುವೇಳೆ ಟಿಕೇಟ್ ಸಿಕ್ಕಿದರೂ ಕೂಡ ಕ್ಷೇತ್ರದ ಜನ ನಿಷ್ಪ್ರಯೋಜಕ ಸಂಸದ ಅನಂತ ಕುಮಾರ್ ಹೆಗಡೆಯವರನ್ನು ಮನೆಗೆ ಕಳುಹಿಸುವ ಕೆಲಸ ಮಾಡಿಯೇ ಮಾಡುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X