5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

Date:

Advertisements

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ, 5, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಣಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ.

ಕಳೆದ ಬುಧವಾರ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸತ್ತು. ಸರ್ಕಾರದ ಮೇಲ್ಮನಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಏಕಸದಸ್ಯ ಪೀಠದ (ಮಾರ್ಚ್‌ 6) ಆದೇಶಕ್ಕೆ ಮಧ್ಯಂತರ ತಡೆ ನೀಡಿ, 5, 8, 9ನೇ ತರಗತಿಯ ಬೋರ್ಡ್‌ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠವು 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಂಗಳವಾರ ವಿಚಾರಣೆ ನಡೆಸಿದ್ದು, ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಿದೆ.

Advertisements

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ, 5, 8 ಮತ್ತು 9ನೇ ತರಗತಿಯ ಇನ್ನುಳಿದ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. ಆದರೆ, 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ, 11ನೇ ತರಗತಿ ಪರೀಕ್ಷೆ ಬಗ್ಗೆ ನ್ಯಾಯಪೀಠವು ಯಾವುದೇ ಆದೇಶ ನೀಡಿಲ್ಲ.

ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ಮಕ್ಕಳ ಪ್ರಣಾಳಿಕೆ ಸಿದ್ದಪಡಿಸಿದ ಮಹಸ; ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಲು ಪಕ್ಷಗಳಿಗೆ ಕರೆ

ಖಾಸಗಿ ಶಾಲೆಗಳಿಂದಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠದ ಮುಂದೆ ವಾದ ಮಂಡಿಸಿದೆ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ ಎಂದೂ ಸರ್ಕಾರ ಅಭಿಪ್ರಾಯ ಪಟ್ಟಿದೆ. ವಾದವನ್ನು ಆಲಿಸಿದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿತ್ತು. ಆದರೀಗ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X