ಸಚಿವ ಸಂಪುಟದಲ್ಲೇ ಮಹಿಳಾ ಪ್ರಾತಿನಿಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Date:

Advertisements

“ನಮ್ಮ ಸಚಿವ ಸಂಪುಟದಲ್ಲಿಯೇ ಮಹಿಳಾ ಪ್ರಾತಿನಿಧ್ಯವಿಲ್ಲ, ಈ ಸರ್ಕಾರದಲ್ಲಿ ಇರುವುದು ನಾನೊಬ್ಬಳೇ ಮಹಿಳಾ ಮಂತ್ರಿ. ಅದೂ ಕೂಡಾ ಅರ್ಹತೆ ಆಧಾರದಲ್ಲಿ ಅಲ್ಲ, ಮಹಿಳಾ ಕೋಟ ಇರುವ ಕಾರಣದಿಂದಾಗಿ ನಾನು ಸಚಿವೆ ಆಗಿದ್ದೇನೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, “ಸರ್ಕಾರಿ ಉದ್ಯೋಗ ಸೇರಿದಂತೆ ಬೇರೆ ಎಲ್ಲ ಕ್ಷೇತ್ರದಲ್ಲೂ ಮಹಿಳೆಯರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗಿದೆ. ಮಹಿಳೆಯರು ಈಗ ಎಲ್ಲಾ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದ್ದಾರೆ. ಆದರೂ ಕೂಡಾ ಪುರುಷರಿಗೆ ಸಮಾನವಾದ ಅವಕಾಶ ಮಹಿಳೆಯರಿಗೆ ಲಭ್ಯವಾಗುತ್ತಿಲ್ಲ. ಸಮಾನ ಅವಕಾಶ ಸಿಕ್ಕರೆ ಮಾತ್ರ ಮಹಿಳೆಯರು ಮಾಡಿದ ಸಾಧನೆ ಸಾರ್ಥಕ” ಎಂದು ಸಚಿವೆ ಅಭಿಪ್ರಾಯಿಸಿದರು.

“ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಮಹಾತ್ಮರಾಗಲು, ನೆಹರೂ ದೇಶವನ್ನು ಮುನ್ನಡೆಸಲು ಅವರ ಪತ್ನಿಯರ ಕೊಡುಗೆಯೂ ಇದೆ, ಅವರ ಪತ್ನಿಯರ ತ್ಯಾಗ ಪರಿಶ್ರಮವೂ ಇದರಲ್ಲಿದೆ. ದೇಶದಲ್ಲಿ ಬಹುತೇಕ ಪುರಷ ಸಾಧಕರ ಹಿಂದೆ ಮಹಿಳೆಯರ ಪಾತ್ರ ಇರುತ್ತದೆ” ಎಂದು ಹೇಳಿದರು.

Advertisements

“ಭಾರತದಲ್ಲಿ ಕೌಟುಂಬಿಕ ಚೌಕಟ್ಟಿನಲ್ಲಿಯೇ ಇದ್ದು, ಸೀಮಿತ ಅವಕಾಶವನ್ನು ಬಳಸಿಕೊಂಡು ಮಹಿಳೆಯರು ಮಾಡಿದ, ಮಾಡುತ್ತಿರುವ ಸಾಧನೆಗೆ ನಮ್ಮ ಜಗತ್ತು ಬೆರಗಾಗಿದೆ. ಮಹಿಳೆಯರು ಕೂಲಿ ಕಾರ್ಮಿಕರಾಗಿಯೂ ಕೆಲಸ ಮಾಡುತ್ತಾರೆ, ಗಗನಯಾನಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ, ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ಇದ್ದಾರೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X