‘ಭಾರತಕ್ಕಾಗಿ ಆಡುವುದಿಲ್ಲ – ಐಪಿಎಲ್‌ನಲ್ಲಿ ಮಾತ್ರ ಆಡುತ್ತೀರಿ’; ಹಾರ್ದಿಕ್ ಪಾಂಡ್ಯ ವಿರುದ್ಧ ಮಾಜಿ ಕ್ರಿಕೆಟಿಗ ಅಸಮಾಧಾನ

Date:

Advertisements

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಲವೇ ವಾರಗಳಲ್ಲಿ ಆರಂಭವಾಗಲಿದೆ. ಈ ವರ್ಷದ ಐಪಿಎಲ್‌ನಲ್ಲಿ ಕುತೂಹಲಕಾರಿಯಾಗಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಆಟಗಾರರನ್ನು ಬದಲಿಸಲಾಗಿದೆ. ಐದು ಬಾರಿಯ ಚಾಂಪಿಯನ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ತಂಡದ ನಾಯಕತ್ವ ಪಡೆದಿದ್ದಾರೆ. ತಂಡದ ಹಿಂದಿನ ನಾಯಕ ರೋಹಿತ್ ಶರ್ಮಾ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ತನ್ನ ಹಳೆಯ ಫ್ರಾಂಚೈಸಿಯನ್ನು ಯಶಸ್ಸಿನೊಂದಿಗೆ ಮುನ್ನಡೆಸಬಹುದೇ ಎಂಬ ಚರ್ಚೆಗಳು ಕೂಡ ನಡೆಯುತ್ತಿವೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರು ಮಾತನಾಡಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, “ಎಂಐ ಅವಸರದ ನಿರ್ಧಾರ ತೆಗೆದುಕೊಂಡಿದೆಯೇ? ಅಥವಾ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡುವ ನಿರ್ಧಾರ ಸರಿಯಾಗಿದೆಯೇ?” ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿರುವ ಪ್ರವೀಣ್ ಕುಮಾರ್ ಅವರನ್ನು ಕೇಳಲಾಗಿದೆ.

ಪ್ರಶ್ನೆಗೆ ಉತ್ತರಿಸಿರುವ ಪ್ರವೀಣ್‌, ”ಐಪಿಎಲ್‌ಗೆ ಎರಡು ತಿಂಗಳ ಮೊದಲು ನೀವು ಗಾಯಗೊಂಡಿದ್ದೀರಿ. ನೀವು ದೇಶಕ್ಕಾಗಿ ಆಡುವುದಿಲ್ಲ. ನೀವು ನಿಮ್ಮ ರಾಜ್ಯಕ್ಕಾಗಿ ದೇಸಿ ಕ್ರಿಕೆಟ್‌ನಲ್ಲಿಯೂ ಆಡುವುದಿಲ್ಲ. ಆದರೆ, ನೇರವಾಗಿ ಐಪಿಎಲ್‌ನಲ್ಲಿ ಆಡುತ್ತೀರಿ. ಇದು ಹೇಗೆ? ಈಗ ಜನರು ಐಪಿಎಲ್‌ಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಾರೆ. ಹಣ ಸಂಪಾದಿಸುವುದು ಸರಿ, ನಿಮ್ಮನ್ನು ತಡೆಯುವವರು ಯಾರು? ಅದರಲ್ಲಿ ತಪ್ಪೇನಿಲ್ಲ. ಆದರೆ, ನೀವು ರಾಜ್ಯ ಮತ್ತು ದೇಶಕ್ಕಾಗಿ ಆಡಬೇಕು” ಎಂದು ಹೇಳಿದ್ದಾರೆ.

Advertisements

 

“ಹಾರ್ದಿಕ್ ಪಾಂಡ್ಯ ಅವರು ಐಪಿಎಲ್‌ಗೆ ಮಾತ್ರ ಯಾವ ರೀತಿ ಫಿಟ್ ಆಗಿದ್ದಾರೆ. ಆದರೆ, ಭಾರತ ತಂಡಕ್ಕೆ ಹೇಗೆ ಫಿಟ್ ಆಗಿಲ್ಲ ಎಂಬ ಕುರಿತು ಮಾತನಾಡಿದ್ದಾರೆ. ಎಂಐ ತಂಡದಲ್ಲಿ ರೋಹಿತ್ ಶರ್ಮಾ ಇನ್ನೂ 3-4 ವರ್ಷಗಳ ನಾಯಕತ್ವ ವಹಿಸಬಹುದಿತ್ತು” ಎಂದು ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಅವರು ಭಾವಿಸುತ್ತಾರೆ.

ಐಪಿಎಲ್‌ಗಿಂತ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆದ್ಯತೆ ನೀಡುವಂತೆ ಮತ್ತು ಅವರ ವೃತ್ತಿಜೀವನದಲ್ಲಿ ಎರಡೂ ವಿಷಯಗಳನ್ನು ಸಮವಾಗಿ ನೋಡುವಂತೆ ಅವರು ಸಲಹೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X