ಬೀದರ್‌ | ಈದಿನ ಫಲಶೃತಿ : ತಾಂಡಾಕ್ಕೆ ಬಂತು ಹೊಸ ಬೋರವೆಲ್‌ , ನೀರಿನ ಸಮಸ್ಯೆಗೆ ದೊರೆಯಿತು ಮುಕ್ತಿ

Date:

Advertisements

ಔರಾದ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೀಮರಾವ ನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬಿವಿಸಿ, ಜನರು ಜೀವ ಜಲಕ್ಕಾಗಿ ಪರದಾಡುತ್ತಿದ್ದ ಪರಿಸ್ಥಿತಿ ಕುರಿತು ʼಈದಿನ.ಕಾಮ್‌ʼ ಪ್ರಕಟಿಸಿದ ವರದಿಗೆ ಫಲಶೃತಿ ಲಭಿಸಿದೆ.

ಈದಿನ.ಕಾಮ್‌ ನಲ್ಲಿ ಫೆ.23 ರಂದು ʼಕುಡಿಯುವ ನೀರಿಗಾಗಿ ಪರದಾಡುತ್ತಿರುವ ಭೀಮರಾವ್ ನಾಯ್ಕ ತಾಂಡಾ ನಿವಾಸಿಗಳುʼ ಎಂಬ ಶೀರ್ಷಿಕೆಯಲ್ಲಿ ಮೊಟ್ಟ ಮೊದಲು ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿಗೆ ಎಚ್ಚೆತುಕೊಂಡ ತಾಲೂಕು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಎಕಂಬಾ ಗ್ರಾಮ ಪಂಚಾಯಿತಿ ಪಿಡಿಒ ಅವರು ತಾಂಡಾಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರದಲ್ಲಿ ತಾಂಡಾದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ನೀರಿನ ಸಮಸ್ಯೆ ಬಗ್ಗೆ ಮುತುವರ್ಜಿ ವಹಿಸಿದ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್‌ ಅಧಿಕಾರಿಗಳ ನೇತ್ರತ್ವದಲ್ಲಿ ಮಾರ್ಚ್‌ 10 ರಂದು ಹೊಸ ಬೋರವೆಲ್‌ ಕೊರೆಸಿ, ಭೀಮಾ ನಾಯಕ ತಾಂಡಾ ನಿವಾಸಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಭೀಮರಾವ್ ನಾಯ್ಕ್ ತಾಂಡಾ ನಿವಾಸಿಗಳಿಗೆ ನೀರಿನ ಸಮಸ್ಯೆ ಕುರಿತು ʼಈದಿನ.ಕಾಮ್ʼ ವರದಿಗಾರರು ತಾಂಡಾಕ್ಕೆ ಭೇಟಿ ನೀಡಿ ಮೊದಲ ಬಾರಿಗೆ ವಿಶೇಷ ವರದಿ ಪ್ರಕಟಿಸಿದರು. ಇದಕ್ಕೆ ಸ್ಪಂದಿಸಿದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದೀಗ ತಾಂಡಾದಲ್ಲಿ ಹೊಸ ಬೊರವೆಲ್‌ ಕೊರೆಸಿದ್ದಾರೆ. ತಾಂಡಾ ಜನರಿಗೆ ನೀರಿನ ಸಮಸ್ಯೆ ಪರಿಹಾರಕ್ಕಾಗಿ ವಿಶೇಷ ಕಾಳಜಿಯಿಂದ ಸುದ್ದಿ ಪ್ರಕಟಿಸಿದ ʼಈದಿನ.ಕಾಮ್‌ʼ ತಂಡಕ್ಕೆ ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಜಿಲ್ಲಾ ಸಂಚಾಲಕ ಬಾಬುರಾವ ಕೌಠಾ ಧನ್ಯವಾದ ತಿಳಿಸಿದ್ದಾರೆ.

“ತಾಂಡಾದಲ್ಲಿ ಈಗಾಗಲೇ ಸರ್ಕಾರದ ಅನುದಾನದಲ್ಲಿ ಕೊರೆಸಿದ ತೆರೆದ ಬಾವಿ ಇದೆ. ಆದರೆ ಬಾವಿಗೆ ಜಮೀನು ನೀಡಿದ ಭೂಮಾಲಿಕರ ತಕರಾರಿನಲ್ಲಿರುವ ಕಾರಣ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬವಿಸಿತ್ತು. ತಾಂಡಾದಲ್ಲಿ ಶಾಶ್ವತ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರದ 30 ಲಕ್ಷ ರೂ. ವೆಚ್ಚ ಅನುದಾನದಲ್ಲಿ ಕೊರೆಸಿದ ತೆರೆದ ಬಾವಿ ಗ್ರಾಮ ಪಂಚಾಯತ್‌ ಸುಪರ್ದಿಗೆ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ತಾಂಡಾ ನಿವಾಸಿ ಮಾರುತಿ ರಾಠೋಡ್‌ ಮಾತನಾಡಿ, ʼಈದಿನ.ಕಾಮ್ʼ ನ್ಯೂಸ್‌ನವರು ತಾಂಡಾಕ್ಕೆ ಖುದ್ದು ಭೇಟಿ ನೀಡಿ ಮೊದಲು ಸುದ್ದಿ ಮಾಡಿದರು, ಸುದ್ದಿಯ ಫಲವಾಗಿ ನಮಗೆ ಕುಡಿಯುವ ನೀರು ಸಿಗುವಂತಾಗಿದೆ” ಎಂದು ಈದಿನ.ಕಾಮ್‌ ಮಾಧ್ಯಮಕ್ಕೆ ಧನ್ಯವಾದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X