ಸಿಎಎಗೆ ವಿರೋಧ | ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗೆ ಹಲವಾರು ಮಧ್ಯಂತರ ಅರ್ಜಿ ಸಲ್ಲಿಕೆ

Date:

Advertisements

ಲೋಕಸಭಾ ಚುನಾವಣೆಯು ಸಮೀಪಿಸುತ್ತಿರುವಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶಾದ್ಯಂತ ಜಾರಿ ಮಾಡಿದೆ. ಇದು ವ್ಯಾಪಕ ವಿರೋಧಕ್ಕೆ ಕಾರಣವಾಗುತ್ತಿದೆ.

ಈ ನಡುವೆ ತಮಿಳುನಾಡು ಹಾಗೂ ಕೇರಳ ಸರ್ಕಾರವು ,”ನಮ್ಮ ರಾಜ್ಯದಲ್ಲಿ ಈ ಕಾಯ್ದೆ (ಸಿಎಎ) ಜಾರಿ ಮಾಡಲ್ಲ” ಎಂದಿದೆ.

ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಮಾ.11ರಂದು ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

Advertisements

ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಾ ಮತ್ತು ಅಸ್ಸಾಂನ ಕಾಂಗ್ರೆಸ್‌ ಸಂಸದ ಅಬ್ದುಲ್ ಖಲೀಕ್ ಅವರು ಸಿಎಎ ಅನುಷ್ಠಾನಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ನಿಯಮಗಳು ಅಸಾಂವಿಧಾನಿಕ ಮತ್ತು ಅಸ್ಸಾಂ ಒಪ್ಪಂದವನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, ಸಿಎಎಯ ಮೂಲಕ ಎನ್‌ಆರ್‌ಸಿಯಿಂದ ಮುಸ್ಲಿಮರನ್ನು ಮಾತ್ರ ಹೊರಗಿಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಮಾನತೆ, ಜಾತ್ಯತೀತತೆ ಮತ್ತು ತಾರತಮ್ಯದಂತಹ ಸಾಂವಿಧಾನಿಕ ತತ್ತ್ವಗಳ ಉಲ್ಲಂಘನೆಯ ಬಗ್ಗೆ ಅರ್ಜಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಅಸ್ಸಾಂನಲ್ಲಿ ಸಿಎಎ ವಿರುದ್ಧ ಮತ್ತೊಮ್ಮೆ ಪ್ರತಿಭಟನೆಗಳು ಪ್ರಾರಂಭವಾಗಿರುವ ಬೆನ್ನಲ್ಲೇ ಈ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.

2019ರಲ್ಲಿ ಕಾಯ್ದೆಗೆ ಸಂಸತ್ ಒಪ್ಪಿಗೆ ನೀಡಿದ ಸಮಯದಲ್ಲೂ ಸಹ ಐಯುಎಂಎಲ್ ಸಂಘಟನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ಬಗ್ಗೆ ತೀರ್ಪು ಇನ್ನಷ್ಟೇ ಬರಬೇಕಿದೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗಳು ಕೂಡ ಅರ್ಜಿ ಸಲ್ಲಿಕೆ ಮಾಡಿವೆ. ಸಿಎಎ ಕಾನೂನು ಸಂವಿಧಾನ ವಿರೋಧಿಯಾಗಿದ್ದು, ಮುಸ್ಲಿಮರನ್ನು ತಾರತಮ್ಯ ಮಾಡುತ್ತದೆ. ಇದನ್ನು ಸ್ವೇಚ್ಛಾಚಾರದಿಂದ ಜಾರಿ ಮಾಡಲಾಗಿದೆ ಎಂದು ಈ ಸಂಘಟನೆಗಳು ಹೇಳಿದ್ದು, ಸಿಎಎ ಜಾರಿಗೆ ತಡೆ ನೀಡಬೇಕು ಎಂದು ಮಧ್ಯಂತರ ಅರ್ಜಿಯಲ್ಲಿ ಕೋರಿವೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X