ಮಹಿಳೆಯರ ಸ್ವಾಭಿಮಾನ ಮತ್ತು ಐಕ್ಯತೆಗಾಗಿ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನಾಲ್ಕು ವಿಶೇಷ ಮಹಿಳೆಯರ ಪುತ್ಥಳಿ ಸ್ಥಾಪಿಸಬೇಕು ಎಂದು ಮಹಿಳಾ ಸ್ವಾಭಿಮಾನ ಹೋರಾಟ ಸಮಿತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
“ಮಾರ್ಚ್ 8ರಂದು ವಿಶ್ವದಾದ್ಯಂತ ಎಲ್ಲ ದೇಶಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಹಲವು ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಸ್ಮರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮಹಿಳೆಯರ ಸ್ವಾಭಿಮಾನ ಹಾಗೂ ಐಕ್ಯತೆಯ ಸಂಕೇತವಾಗಿ ಒಂದೇ ವೃತ್ತದಲ್ಲಿ ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಅಕ್ಕಮಹಾದೇವಿ, ಆನಿ ಬೆಸೆಂಟ್ ಈ ನಾಲ್ಕು ವಿಶೇಷ ಮಹಿಳೆಯರ ಪುತ್ಥಳಿ ಸ್ಥಾಪಿಸಬೇಕೆಂದು 2022ರಲ್ಲೇ ಮನವಿ ಮಾಡಲಾಗಿತ್ತು. ಜಿಲ್ಲಾಡಳಿತದ ನಿರ್ಲಕ್ಷ್ಯ ಖಂಡನೀಯ” ಎಂದರು.
ಮನವಿ ಸಲ್ಲಿಸಿ ಎರಡು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಂಡು ಸಾಧನೆ ಮಾಡಿದ ಮಹಾನ್ ಮಹಿಳೆಯರ ಪುತ್ಥಳಿ ಸ್ಥಾಪಿಸಿ ಮಹಿಳೆಯರಿಗೆ ಗೌರವ ಸೂಚಿಸುವ ಕೆಲಸ ಮಾಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಸಾರ್ವಜನಿಕರು ವಸ್ತುಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು: ಶಾಸಕ ಪ್ರದೀಪ್ ಈಶ್ವರ್
ಈ ಸಂದರ್ಭದಲ್ಲಿ ಮೋಕ್ಷಮ್ಮ, ವಿರುಪಮ್ಮ, ಮರಿಯಮ್ಮ, ಈರಮ್ಮ, ಕವಿತಾ, ಖಾದ ಬೀ, ಇಂದ್ರಮ್ಮ, ಶಾಂಭವಿ, ಅಕ್ಕಮ್ಮ, ಮಲ್ಲಮ್ಮ, ಸೇರಿದಂತೆ ಅನೇಕರು ಇದ್ದರು.
ವರದಿ : ಹಫೀಜುಲ್ಲ
