ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ | ಸರ್ವ ಜನಾಂಗದ ಬೀಡಿನಲ್ಲಿ ಬಿಜೆಪಿಗೆ ಈ ಬಾರಿ ಆಘಾತ ಸಾಧ್ಯತೆ?

Date:

Advertisements

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ 2008 ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯ ಭಾಗವಾಗಿ ರಚಿಸಲಾದ ಕ್ಷೇತ್ರ. ಇದನ್ನು ಬೆಂಗಳೂರು ಉತ್ತರ ಮತ್ತು ದಕ್ಷಿಣ ಲೋಕಸಭಾ ಕ್ಷೇತ್ರಗಳ ಕೆಲವು ಭಾಗಗಳನ್ನು ವಿಂಗಡಿಸಿ ರಚಿಸಲಾಗಿದೆ.

ಮುಸ್ಲಿಂ, ಕ್ರೈಸ್ತ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನಸಂಖ್ಯೆ ಬೆಂಗಳೂರು ಕೇಂದ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ 2009 ರಿಂದ 2019ರವರೆಗೂ ಕಳೆದ ಮೂರು ಅವಧಿಯಿಂದಲೂ ಬಿಜೆಪಿಯ ಪಿ ಸಿ ಮೋಹನ್ ಆಯ್ಕೆಯಾಗುತ್ತಿದ್ದಾರೆ.

2009ರಲ್ಲಿ ಕಾಂಗ್ರೆಸ್ಸಿನಿಂದ ಮಾಜಿ ಸಂಸದ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಎಚ್ ಟಿ ಸಾಂಗ್ಲಿಯಾನ ಮತ್ತು ಜೆಡಿಎಸ್‌ನಿಂದ ಜಮೀರ್ ಅಹ್ಮದ್ ಖಾನ್, 2014 ಮತ್ತು 2019ರಲ್ಲಿ ಕಾಂಗ್ರೆಸ್ಸಿನಿಂದ ರಿಜ್ವಾನ್ ಅರ್ಷದ್, ಪಕ್ಷೇತರರಾಗಿ ಚಿತ್ರನಟ ಪ್ರಕಾಶ್ ರಾಜ್ ಸ್ಪರ್ಧಿಸಿ ಪರಾಭವಗೊಂಡಿದ್ದರು. ಪಿ ಸಿ ಮೋಹನ್‌ ಅವರಿಗೆ 2009 ಹಾಗೂ 2019ರಲ್ಲಿ ಕಾಂಗ್ರೆಸ್‌ನಿಂದ ತೀವ್ರ ಸ್ಪರ್ಧೆ ಎದುರಾಗಿತ್ತು. ಎಚ್ ಟಿ ಸಾಂಗ್ಲಿಯಾನ ಅವರು 35,218 ಮತಗಳ ಅಂತರದಿಂದ ಸೋಲು ಕಂಡರೆ, 2019ರಲ್ಲಿ ರಿಜ್ವಾನ್‌ ಅರ್ಷದ್ 5,31,885 ಮತಗಳನ್ನು ಪಡೆದು ತೀವ್ರ ಸ್ಪರ್ಧೆ ಒಡ್ಡಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಟ ಪ್ರಕಾಶ್ ರೈ 28,906 ಮತ ಪಡೆದಿದ್ದರು.

Advertisements

ಕ್ಷೇತ್ರದಲ್ಲಿ ಈ ಬಾರಿ ಅಭ್ಯರ್ಥಿಗಳ ಜಿದ್ದಾಜಿದ್ದಿ

ಬಿಜೆಪಿಗೆ 2014 ರಿಂದ 2019ರ ಚುನಾವಣೆಯಲ್ಲಿ ಗೆಲುವಿನ ಅಂತರ ಕಡಿಮೆಯಾಗುತ್ತಿರುವುದು ಕೂಡ ಈ ಬಾರಿಯ ಚುನಾವಣೆಯಲ್ಲಿ ಸೋಲಿನ ಮುನ್ಸೂಚನೆ ಕಾಣಿಸುತ್ತಿದೆ. ಪ್ರದಾನಿ ಮೋದಿ ವರ್ಚಸ್ಸನ್ನು ನಂಬಿ ಆಯ್ಕೆಯಾಗುತ್ತಿರುವ ಸಂಸದ ಪಿ ಸಿ ಮೋಹನ್ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದು ಅಷ್ಟಕಷ್ಟೆ, ಕೆಲವೊಂದು ಪ್ರದೇಶಗಳಲ್ಲಿ ಅಭಿವೃದ್ಧಿ ಹೊಂದಿದ್ದರೆ ಅದಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಕಾರಣ ಎನ್ನುತ್ತಿದ್ದಾರೆ ಕ್ಷೇತ್ರದ ಮತದಾರರು. ಅತಿ ಹೆಚ್ಚು ಕೊಳಗೇರಿ ಪ್ರದೇಶಗಳನ್ನು ಹೊಂದಿರುವ ಸರ್ವಜ್ಞ ನಗರ, ಶಾಂತಿ ನಗರ, ಗಾಂಧಿ ನಗರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಇನ್ನೂ ಮರೀಚಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ | ಎರಡು ದಶಕಗಳ ಬಿಜೆಪಿ ಕೋಟೆ ಕೆಡವಲು ಕೈ ರಣತಂತ್ರ

ಪಿ ಸಿ ಮೋಹನ್‌ಗೆ ನಾಲ್ಕನೇ ಬಾರಿ ಟಿಕೆಟ್

ಮೇ ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ನಾಲ್ಕನೇ ಬಾರಿಯೂ ಪಿ ಸಿ ಮೋಹನ್‌ ಕಣಕ್ಕಿಳಿಯಲಿದ್ದಾರೆ. ಮೂರು ಬಾರಿ ಗೆಲುವು ಕಂಡಿರುವ ಹಾಲಿ ಸಂಸದರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ.

IMG46

ಕಾಂಗ್ರೆಸ್‌ನಿಂದ ಹಲವು ಹೆಸರುಗಳು ಪೈಪೋಟಿಯಲ್ಲಿ

ಕಾಂಗ್ರೆಸ್‌ನಿಂದ ಈ ಬಾರಿ ಹೊಸಮುಖಕ್ಕೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದೆ. ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮೂವರು ಸಚಿವರಾದ ಕೆ ಜೆ ಜಾರ್ಜ್‌, ದಿನೇಶ್ ಗುಂಡೂರಾವ್ ಹಾಗೂ ಜಮೀರ್ ಅಹ್ಮದ್ ಖಾನ್ ಸ್ಪರ್ಧೆಗೆ ಒಲವು ತೋರಿಲ್ಲ. ಎರಡು ಬಾರಿ ಸ್ಪರ್ಧಿಸಿ ಪರಾಭವಗೊಂಡಿರುವ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ತಾವು ಈ ಬಾರಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಸಚಿವ ದಿನೇಶ್ ಗುಂಡೂರಾವ್‌ ಒಲವು ತೋರಿಸಿಲ್ಲವಾದರೂ ಅವರ ಪತ್ನಿ ಟಬು ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ | ಬಿಜೆಪಿ ಭದ್ರಕೋಟೆ ವಶಕ್ಕೆ ಕಾಂಗ್ರೆಸ್ ಅವಿರತ ಪ್ರಯತ್ನ

ಕೆಪಿಸಿಸಿಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಘಟನೆಯ ಹಿನ್ನೆಲೆಯಿಂದ ಬಂದ ಎಸ್ ಎ ಹುಸೇನ್ ಹೆಸರು ಬಲವಾಗಿ ಕೇಳಿ ಬಂದಿದೆ. ‘ಜಲ ಸತ್ಯಾಗ್ರಹ’ದ ಮೂಲಕ ಜನರ ಗಮನ ಸೆಳೆಯುವ ಪ್ರಯತ್ನವನ್ನು ಹುಸೇನ್ ನಡೆಸುತ್ತಿದ್ದು, ಹೈಕಮಾಂಡ್‌ಗೆ ಕಳುಹಿಸಿರುವ ಪಟ್ಟಿಯಲ್ಲೂ ಇವರಿಬ್ಬರ ಹೆಸರು ಮಾತ್ರ ಇದೆ ಎಂದು ಹೇಳಲಾಗುತ್ತಿದೆ.

ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಹಾಗೂ ಹ್ಯಾರಿಸ್ ಪುತ್ರ ನಲಪಾಡ್ ಹೆಸರು ಕೂಡ ಕೇಳಿಬರುತ್ತಿದೆ. ಇವರ ಜೊತೆ ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್‌ ಹೆಸರು ಕೂಡ ಚಾಲ್ತಿಯಲ್ಲಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧ ಸ್ಪರ್ಧಿಸಿ ಪೈಪೋಟಿ ನೀಡಿದ ಅನುಭವ ಹರಿಪ್ರಸಾದ್ ಅವರಿಗಿದೆ.

PC mohan

ಹಾಸ್ಯ ನಟ ಕೂಡ ಚಾಲ್ತಿಯಲ್ಲಿ

ಇವರೆಲ್ಲರ ನಡುವೆ ಕನ್ನಡ ಚಿತ್ರರಂಗದ ಹಾಸ್ಯನಟ ಹಾಗೂ ಸಂಗೀತ ನಿರ್ದೇಶಕ ಸಾಧು ಕೋಕಿಲ ಕೂಡ ತಾವು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.

ನಾನೊಬ್ಬ ಕಲಾವಿದನಾಗಿರುವದರಿಂದ ಎಲ್ಲ ಸಮುದಾಯಗಳ ಜನ ನನ್ನನ್ನು ಇಷ್ಟಪಡುತ್ತಾರೆ. ನಾನು ಯಾವತ್ತೂ ಜನರನ್ನು ತಾರತಮ್ಮ ಭಾವದಿಂದ ನೋಡಿದವನಲ್ಲ. ಎಲ್ಲ ವರ್ಗದವರನ್ನು ಸಮಾನವಾಗಿ ನೋಡುತ್ತೇನೆ. ಚಾಮರಾಜಪೇಟೆ ಮತ್ತು ಶಿವಾಜಿನಗರದಲ್ಲಿರುವ ಕ್ರೈಸ್ತ ಸಮುದಾಯದವರೆಲ್ಲ ನನಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಒಂದು ವೇಳೆ ಟಿಕೆಟ್ ಸಿಕ್ಕರೆ ಗೆಲ್ಲುವ ಭರವಸೆಯಿದೆ ಎಂದು ತಿಳಿಸಿದ್ದಾರೆ.

ಸಾಧು ಕೋಕಿಲ ಅವರು ಕ್ರೈಸ್ತ ಸಮುದಾಯಕ್ಕೆ ಸೇರಿದವರಾಗಿದ್ದು, ಬೆಂಗಳೂರು ಕೇಂದ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕ್ರೈಸ್ತ ಸಮುದಾಯದವರಿದ್ದಾರೆ. ಇತ್ತೀಚಿಗಷ್ಟೆ ರಾಜ್ಯ ಸರ್ಕಾರ ಸಾಧು ಕೋಕಿಲ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿತ್ತು.

ಜೆಡಿಎಸ್ ಪಕ್ಷ ಈ ಕ್ಷೇತ್ರದಲ್ಲಿ ಹಿಂದಿನಿಂದಲೂ ಹೆಚ್ಚಿನ ಹಿಡಿತ ಹೊಂದಿಲ್ಲ. ಪ್ರಸ್ತುತ ಎನ್‌ಡಿಎ ಮೈತ್ರಿ ಪಕ್ಷವಾಗಿರುವ ಕಾರಣ ಬೆಂಗಳೂರು ಕೇಂದ್ರದಲ್ಲಿ ಈ ಪಕ್ಷ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ.

ವಿಧಾನಸಭಾ ಕ್ಷೇತ್ರಗಳು

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಂತಿನಗರ, ಗಾಂಧಿನಗರ, ಸರ್ವಜ್ಞನಗರ, ಶಾಂತಿನಗರ, ಚಾಮರಾಜಪೇಟೆ ವಿಧಾನಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ರಾಜಾಜಿನಗರ ಹಾಗೂ ಮೀಸಲು ಕ್ಷೇತ್ರಗಳಾದ ಮಹದೇವಪುರ ಹಾಗೂ ಸಿ.ವಿ.ರಾಮನ್ ನಗರ ಬಿಜೆಪಿ ತೆಕ್ಕೆಯಲ್ಲಿವೆ.

ಅನ್ಯ ಭಾಷಿಕರು ಹೆಚ್ಚಿರುವ ಕ್ಷೇತ್ರ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಪುರುಷರು 11.50 ಲಕ್ಷ ಹಾಗೂ ಮಹಿಳೆಯರು 10.58 ಲಕ್ಷ ಒಳಗೊಂಡು ಒಟ್ಟು 23 ಲಕ್ಷ ಮತದಾರರಿದ್ದಾರೆ. ಮುಸ್ಲಿಂ, ಕ್ರೈಸ್ತ, ದಲಿತ ಹಾಗೂ ಹಿಂದುಳಿದ ವರ್ಗದ ಮತದಾರರು ಈ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಕೆಲವು ಅಂಕಿಅಂಶಗಳ ಪ್ರಕಾರ ಜಾತಿವಾರು ಪ್ರಾತಿನಿಧ್ಯದಲ್ಲಿ 6 ಲಕ್ಷ ಮುಸ್ಲಿಮರು, 5 ಲಕ್ಷ ಕ್ರೈಸ್ತರು, 5 ಲಕ್ಷ ದಲಿತರು ಹಾಗೂ ಬಲಿಜಿಗ, ಗೊಲ್ಲ, ಕುರುಬ, ತಿಗಳ, ವಿಶ್ವಕರ್ಮ, ಮಡಿವಾಳ, ಕಮ್ಮ ಇತ್ಯಾದಿ ಹಿಂದುಳಿದ ವರ್ಗದವರು ಸುಮಾರು 6 ಲಕ್ಷ ಜನರಿದ್ದಾರೆ. ಶಿವಾಜಿನಗರ, ಹಲಸೂರು, ಶೇಷಾದ್ರಿಪುರ, ಗಾಂಧಿನಗರ ಭಾಗದಲ್ಲಿ ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನಲಾಗಿದೆ.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X