ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕಾರು ಮತ್ತು ತೂಫಾನ್ ವಾಹನ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಕಾರು ಕುಕ್ಕೆ ಕಡೆ ಮತ್ತು ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಮೃತರು ಬೇಳೂರು ಕಡೆಯವರು ಎಂದು ಗುರುತಿಸಲಾಗಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.