ಬೆಂಗಳೂರು ಗ್ರಾಮಂತರ | 32 ಮಂದಿ ಬಾಲಕಾರ್ಮಿಕರ ರಕ್ಷಣೆ: ಡಾ ಎನ್ ಶಿವಶಂಕರ

Date:

Advertisements

14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ 2 ವರ್ಷದವರೆಗೆ ಜೈಲು ಶಿಕ್ಷೆ ಮತ್ತು ₹20 ಸಾವಿರದಿಂದ ₹50 ಸಾವಿರುಗಳವರೆಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ್ ಎಚ್ಚರಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಜನಜಾಗೃತಿ ಸಂಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

“ಬಾಲಕಾರ್ಮಿಕ ಪದ್ಧತಿಯಂತಹ ಸಮಾಜ ವಿರೋಧಿ ಆಚರಣೆ ಕುರಿತು ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಅಧಿಕಾರಿಗಳು ಅ ಬಗ್ಗೆ ದೊಡ್ಡ ಮಟ್ಟದಲ್ಲಿ ಅರಿವು ಮೂಡಿಸಬೇಕಿದೆ” ಎಂದು ಕರೆ ನೀಡಿದರು.

Advertisements

“ಪ್ರಸ್ತುತ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯಲ್ಲಿ 32 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಸಂಬಂಧಪಟ್ಟ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ” ಎಂದು ತಿಳಿಸಿದರು.

“ದುಡಿಯುವ ಮಕ್ಕಳು/ಕಿಶೋರರು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಮಕ್ಕಳ ಉಚಿತ ಸಹಾಯವಾಣಿ-1098 ಹಾಗೂ ಪೊಲೀಸ್ ಇಲಾಖೆಯ ತುರ್ತು ಸಹಾಯವಾಣಿ–112ಕ್ಕೆ ಕರೆ ಮಾಡಿ ಮಕ್ಕಳನ್ನು ರಕ್ಷಿಸಬೇಕು” ಎಂದು ಕರೆ ನೀಡಿದರು.

“ಜಿಲ್ಲೆಯಾದ್ಯಂತ ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಕೈಗೊಳ್ಳುವುದರ ಜತೆಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲ ಮಕ್ಕಳಿಗೂ ಕೂಡಾ ಕಡ್ಡಾಯವಾಗಿ ಶಾಲೆಗಳಲ್ಲಿ ಶಿಕ್ಷಣ ನೀಡಿ, ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದೇ ಮುಖ್ಯ ಉದ್ದೇಶವಾಗಿದೆ” ಎಂದರು.

ಇದೇ ವೇಳೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರಡಿಯಲ್ಲಿ ಜಿಲ್ಲೆಯಲ್ಲಿ ಅನಿರೀಕ್ಷಿತ ದಾಳಿ ನಡೆಸಿ ರಕ್ಷಿಸಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಶೈಕ್ಷಣಿಕ ಸಾಮಗ್ರಿಗಳನ್ನು ಮತ್ತು ಅವರ ಪೋಷಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ್ ವಿತರಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆ ಈ ವರ್ಷ ಬೇಡ; ಎಐಡಿಎಸ್‌ಒ ಮನವಿ

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್ ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್ ಎಸ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಶ್ರೀಧರ್, ಶಿವಪ್ಪ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಸಿಬ್ಬಂದಿಗಳಾದ ಕಾವ್ಯ ಮತ್ತು ಲಕ್ಷ್ಮೀಕಾಂತ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X