ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ: ಧಾರವಾಡಕ್ಕೆ ಪ್ರವೇಶ ನಿರಾಕರಣೆ

Date:

Advertisements
  • ಕ್ಷೇತ್ರಕ್ಕೆ ಕಾಲಿಡಲು ಅನುಮತಿ ನಿರಾಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ
  • ಜಿ.ಪಂ ಸದಸ್ಯನ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್

ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಆತ್ಮವಿಶ್ವಾಸದಲ್ಲಿರುವ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ ಎದುರಾಗಿದ್ದು, ಧಾರವಾಡ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ವಿನಯ್‌ ಕುಲಕರ್ಣಿ ಧಾರವಾಡಕ್ಕೆ ಪ್ರವೇಶಿಸದಂತೆ ನಿರಾಕರಿಸಿದೆ.

2016ರ ಜೂನ್‌ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಜಿಮ್‌ನಲ್ಲಿ ಕೊಲೆ ಮಾಡಲಾಗಿತ್ತು. ಕೊಲೆ ಆರೋಪದ ಮೇಲೆ 2020ರ ನವೆಂಬರ್‌ನಲ್ಲಿ ಅಂದಿನ ಶಾಸಕ ವಿನಯ್ ಕುಲಕರ್ಣಿ ಅವರನ್ನು ಪೊಲೀಸರು ಬಂಧಿಸಿದ್ದರು.

ಕೊಲೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ಹಲವು ಷರತ್ತು ವಿಧಿಸಿ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಜೊತೆಗೆ ಧಾರವಾಡಕ್ಕೆ ಪ್ರವೇಶಿಸಿದರೆ ಜಾಮೀನು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು.

Advertisements

ಈ ಪ್ರಕರಣವು ಇನ್ನೂ ನ್ಯಾಯಾಲಯದ ವಿಚಾರಣೆಯಲ್ಲಿದೆ. ಇದೇ ವೇಳೆ ಚುನಾವಣೆಯೂ ಎದುರಾಗಿದೆ. ಹೀಗಾಗಿ, ತಮಗೆ ಧಾವಾಡ ಪ್ರವೇಶಕ್ಕೆ ಅನುಮತಿ ನಿಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ?: ಮುಸ್ಲಿಮರ ಮೀಸಲಾತಿ ರದ್ದು; ಏಪ್ರಿಲ್ 25ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ. ಈ ವೇಳೆ, ವನಯ್ ವಿರುದ್ಧ ವಾದ ಮಂಡಿಸಿದ್ದ ವಕೀಲರು, “ಕಳೆದ ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ಕೂಡ ವಿನಯ್‌ ಧಾರವಾಡ ಪ್ರವೇಶಿಸುವುದನ್ನು ನಿರಾಕರಿಸಿತ್ತು” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಮಾಹಿತಿ ಪಡೆದ ಜನಪ್ರತಿನಿಧಿಗಳ ನ್ಯಾಯಾಲಯವು ವಿಜಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸಿದೆ.

ಮೇ 10ರಂದು ನಡೆಯಲಿರುವ ಚುನಾವಣೆಗೆ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸ್ಪರ್ಧಿಸಿದ್ದಾರೆ. ಅವರ ಪರವಾಗಿ ಅವರ ಪತ್ನಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ, ನ್ಯಾಯಾಲಯವು ಧಾರವಾಡ ಪ್ರವೇಶಕ್ಕೆ ಅವಕಾಶ ಕಲ್ಪಿಸದೇ ಇರುವುದರಿಂದ ವಿನಯ್‌ ಕುಲಕರ್ಣಿ ಮತ್ತು ಕಾಂಗ್ರೆಸ್‌ಗೆ ಹಿನ್ನೆಡೆಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X