ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ ಗೋ ಬ್ಯಾಕ್ ಅಭಿಯಾನದ ಫಲಾನುಭವಿಯಾಗುವ ನಿರೀಕ್ಷೆಯಲ್ಲಿದ್ದ ಸಿ ಟಿ ರವಿ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣೀರು ಎರಚಿತ್ತು. ಆದರೆ ಇದು ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ವರದಾನವಾಗಿದೆ.
ಕಳೆದ ಕೆಲವು ತಿಂಗಳಿನಿಂದ ಶೋಭಾ ಕರಂದ್ಲಾಜೆ ಎಲ್ಲೇ ಹೋದರೂ ಗೋ ಬ್ಯಾಕ್ ಶೋಭಕ್ಕ ಅಭಿಯಾನ ಎದುರಾಗಿತ್ತು. ಆದಾಗ್ಯೂ, ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಕೃಪಕಟಾಕ್ಷದಿಂದ ಬೆಂಗಳೂರು ಉತ್ತರದಿಂದ ಶೋಭಾ ಅವರಿಗೆ ಟಿಕೆಟ್ ಸಿಕ್ಕಿದೆ.
#Karnataka
Soon after BJP announced union minister Shobha Karandlaje’s name for Bangalore North, protests have erupted in the areaLocals holding placards, raising slogans ‘Go Back Shoba Akka’
Incumbent MP & fmr CM Sadananda Gowda had earlier criticised the idea of bringing… pic.twitter.com/hfL8wARDWQ
— Nabila Jamal (@nabilajamal_) March 14, 2024
ಈ ಟಿಕೆಟ್ ಘೋಷಣೆ ಬೆನ್ನಲ್ಲೇ ರೊಚ್ಚಿಗೆದ್ದಿರುವ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಬೆಂಬಲಿಗರು, ನಮ್ಮ ಕ್ಷೇತ್ರಕ್ಕೆ ಶೋಭಕ್ಕ ಬೇಡ. ಬೇರೆ ಕ್ಷೇತ್ರದ ಕಸವನ್ನು ತಂದು ನಮ್ಮಲ್ಲಿ ಸುರಿಯಬೇಡಿ ಎನ್ನುತ್ತಾ ‘ಗೋ ಬ್ಯಾಕ್’ ಅಭಿಯಾನ ಆರಂಭಿಸಿದ್ದಾರೆ.
ಇದನ್ನು ಓದಿದ್ದೀರಾ? ಲೋಕಸಭಾ ಚುನಾವಣೆ | ಬಿಜೆಪಿ 2ನೇ ಪಟ್ಟಿ ಪ್ರಕಟ: ಕರ್ನಾಟಕದಲ್ಲಿ ಯಾರಿಗೆಲ್ಲ ಸಿಕ್ಕಿದೆ ಟಿಕೆಟ್?
ಈ ಬಗ್ಗೆ ಮಾತನಾಡಿರುವ ಸ್ಥಳೀಯ ಬಿಜೆಪಿ ಮುಖಂಡರೋರ್ವರು, ”ನಮ್ಮ ಕ್ಷೇತ್ರದ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ಬೇಡ. ಅವರು ನಮ್ಮ ಕ್ಷೇತ್ರದವರೂ ಅಲ್ಲ. ಹಾಗಾಗಿ, ಸ್ಥಳೀಯ ಒಕ್ಕಲಿಗ ಸಮುದಾಯದ ಬಿಜೆಪಿ ಮುಖಂಡರಿಗೆ ಆದ್ಯತೆ ನೀಡಿ, ಟಿಕೆಟ್ ಕೊಡಿ. ಅಭ್ಯರ್ಥಿ ಬದಲಾಯಿಸಿ” ಎಂದು ಆಗ್ರಹ ವ್ಯಕ್ತಪಡಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ @DVSadanandGowda ಅವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಕುರಿತು ಚರ್ಚಿಸಿ, ಸಂಪೂರ್ಣ ಸಹಕಾರ ಕೋರಲಾಯಿತು.#BJP #BangaloreNorth #ModiKiGuarantee pic.twitter.com/NApniToOyR
— Shobha Karandlaje (Modi Ka Parivar) (@ShobhaBJP) March 14, 2024
“ಮೋದಿ ಗೆಲ್ತಾರೆ, ಬಿಜೆಪಿ ಗೆಲ್ಲಬೇಕು ಅಂದರೆ ಶೋಭಾ ಕರಂದ್ಲಾಜೆ ಹಠಾವೋ, ಬೆಂಗಳೂರು ಉತ್ತರ ಬಿಜೆಪಿ ಬಚಾವೋ” ಎಂಬಿತ್ಯಾದಿ ಪೋಸ್ಟರ್ಗಳನ್ನು ಹಿಡಿದುಕೊಂಡು, ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.
ಹಗ್ಗಜಗ್ಗಾಟದಲ್ಲಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಶೋಭಾ ಕರಂದ್ಲಾಜೆ!
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಬಾರಿ ಸಂಸದೆಯಾಗಿದ್ದರೂ, ಕಾರ್ಯ ವೈಖರಿಯಿಂದ ಅಸಮಾಧಾನಗೊಂಡಿದ್ದ ಬಿಜೆಪಿ ಕಾರ್ಯಕರ್ತರು, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ‘ಗೋ ಬ್ಯಾಕ್ ಶೋಭಕ್ಕ’ ಅಭಿಯಾನ ಆರಂಭಿಸಿದ್ದರು. ಈ ಅಸಮಾಧಾನದ ಬೆನ್ನಲ್ಲೇ, ಡಿ ವಿ ಸದಾನಂದ ಗೌಡ ಎರಡು ಬಾರಿ ಪ್ರತಿನಿಧಿಸಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇತ್ತ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಿ ಟಿ ರವಿ ಹೆಸರು ಕೇಳಿ ಬಂದಿತ್ತಾದರೂ, ಕೊನೆಗೆ ವಿಧಾನ ಪರಿಷತ್ನ ವಿಪಕ್ಷ ನಾಯಕ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿದೆ. ಇದು ಅಚ್ಚರಿ ಮೂಡಿಸಿದೆ.
