ಸಚಿವ ಸಂಪುಟ ಸಭೆ | ಪಿಎಸ್‌ಐ ಅಕ್ರಮ, ಹೆಚ್ಚುವರಿ ತನಿಖೆಗಾಗಿ ಎಸ್​ಐಟಿ‌ ರಚಿಸಲು ತೀರ್ಮಾನ

Date:

Advertisements

ವಿಧಾನಸೌಧದಲ್ಲಿ ಸತತ 3 ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಬಹು ನಿರೀಕ್ಷಿತ ಜಾತಿ ಗಣತಿ ವರದಿ ಮತ್ತು ಸಿಎಎ ಬಗ್ಗೆ ಯಾವುದೇ ಚರ್ಚೆ ಸಭೆಯಲ್ಲಿ ನಡೆದಿಲ್ಲ.

ಸಚಿವ ಸಂಪುಟ ಬಳಿಕ ಕಂದಾಯ‌ ಸಚಿವ ಕೃಷ್ಣಬೈರೇಗೌಡ ಸುದ್ದಿಗೋಷ್ಠಿ ಕರೆದು ಮಾತನಾಡಿ, ಜಾತಿ ಗಣತಿ ವರದಿ ಮತ್ತು ಸಿಎಎ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.

“ವಿಧಾನಸೌಧದ ಆವರಣದಲ್ಲಿ 23 ಕೋಟಿ‌ ರೂ. ವೆಚ್ಚದಲ್ಲಿ‌ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಬೇಕು ಅಂತ ತೀರ್ಮಾನ ಆಗಿದೆ. ಕೆಂಗಲ್ ಹನುಮಂತಯ್ಯ ಪ್ರತಿಮೆಯ ರಸ್ತೆಯ ಪಕ್ಕದಲ್ಲಿ‌ ಸ್ಥಾಪನೆ ಆಗಲಿದೆ. ಇದಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ” ಎಂದರು.

Advertisements

ಫೇಸ್ 3 ಒಪ್ಪಿಗೆ

“ಕಲ್ಲು, ಲೋಹದ ಪ್ರತಿಮೆಗೆ ಎಲ್ಲದಕ್ಕೂ ಹಣ ಬೇಕಾಗುತ್ತದೆ. ಏರ್ಪೋಟ್​​ನಲ್ಲಿ ಕೆಂಪೇಗೌಡ ಪ್ರತಿಮೆಗೆ 40-60 ಕೋಟಿ ರೂ. ಆಗಿತ್ತು. ಬೆಂಗಳೂರಿನಲ್ಲಿ ಅವಶ್ಯಕತೆಗಳು ಬೆಳೆಯುತ್ತಿದೆ. ಸಂಚಾರದ್ದೇ ದೊಡ್ಡ ಸಮಸ್ಯೆ ಆಗಿದೆ. ಟ್ರಾಫಿಕ್‌ ಸಮಸ್ಯೆ ಬಗೆಹರಿಸುವುದಕ್ಕೆ ಮೆಟ್ರೋ ಒಂದೇ ಪರ್ಯಾಯ ಮಾರ್ಗ. ಭವಿಷ್ಯದ ಅವಶ್ಯಕತೆ ಗಮನದಲ್ಲಿ ಇಟ್ಟುಕೊಂಡು‌ ಫೇಸ್ 3 ಒಪ್ಪಿಗೆ ನೀಡಿದೆ. ಎರಡು ಮಾರ್ಗಗಳನ್ನ‌ ಕೈಗೆ ಎತ್ತಿಕೊಳ್ಳಲು ಒಪ್ಪಿಗೆ ನೀಡಿದೆ” ಎಂದು ಹೇಳಿದರು.

“ಮೂರನೇ ಹಂತದ 15,611 ಕೋಟಿ‌ ರೂ. ವೆಚ್ಚದಲ್ಲಿ‌ ಕೈಗೆತ್ತುಕೊಳ್ಳಲು‌ ಸಂಪುಟ ಒಪ್ಪಿಗೆ ನೀಡಿದೆ. ಜೆಪಿ ನಗರ, ಸಿಲ್ಕ್ ಬೋರ್ಡ್​​ನಿಂದ ಕೆಲಸ ನಡೆದಿದೆ. ಸಿಲ್ಕ್ ಬೋರ್ಡ್​​ನಿಂದ ಹೆಬ್ಬಾಳ ಮೇಲ್ಸೇತುವೆವರೆಗೆ ಬಂದಿದೆ. ಸುಮಾರು 35.5 ಕಿ.ಲೋ ಮೀಟರ್​ವರೆಗೆ ನಡೆಯಲಿದೆ” ಎಂದು ತಿಳಿಸಿದರು.

ಸಭೆಯ ಚರ್ಚೆಯಾದ ಸಂಗತಿಗಳು

“ರೈತರ ಉತ್ಪಾದನೆ, ಲಾಭಾಂಶ ಜಾಸ್ತಿ ಆಗಬೇಕು. ಬೆಳೆ ಸಂರಕ್ಷಣೆ, 67 ಕೋಟಿ‌ ವೆಚ್ಚದಲ್ಲಿ ಬಯೋಟೆಕ್ ಅಭಿವೃದ್ಧಿಗೆ ಅಗ್ರಿ‌ ಇನ್ನೊವೇಷನ್ ಸೆಂಟರ್ ಮಾಡಲು‌ ತೀರ್ಮಾನ ಆಗಲಿದೆ. ಬೆಂಗಳೂರಿನಲ್ಲೇ ಎಲೆಕ್ಟ್ರಾನಿಕ್‌ ಸಿಟಿ ಬಳಿ ಕೊಡುತ್ತೇವೆ” ಎಂದು ಹೇಳಿದರು.

“ಕಲ್ಯಾಣ ಕರ್ನಾಟಕದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರ ಓಪನ್​​ಗೆ ಒಪ್ಪಿಗೆ. ಕಡಬ ವೆಟರ್ನರಿ‌ ಕಾಲೇಜಿನ ಅಭಿವೃದ್ದಿಗೆ 163 ಕೋಟಿ ರೂ. ಮೈಸೂರಿನಲ್ಲಿ ಮಹಾರಾಣಿ ಕಾಲೇಜು ಹೊಸ ಹಾಸ್ಟೆಲ್​ ಸ್ಥಾಪನೆಗೆ 170 ಕೋಟಿ ರೂ. ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ” ಎಂದರು.

“ಕೆಂಪೇಗೌಡ ಲೇಔಟ್​ಗಳ ಸೈಟ್​​ಗಳನ್ನ‌ ಲೀಸ್ ಆಧಾರವಾಗಿ ಕೊಟ್ಟಿದ್ದಾರೆ. ಕೆಲವರು ಕಂತುಗಳನ್ನ ಕಟ್ಟೋಕೆ ಆಗಿಲ್ಲ. ಬಿಡಿಎಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ. ಅಲಾಟ್ಮೆಂಟ್ ಆದವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಲು ಮನವಿ ಮಾಡಿದ್ದಾರೆ. ಬಾಕಿ‌ ಹಣ ಪಾವತಿಸಿದವರಿಗೆ ಕೊಡಲಿದ್ದೇವೆ. ಲೀಜ್ ಅಂಡ್ ಸೇಲ್‌ ಮಾಡಿಕೊಡಲು‌ ಸಂಪುಟ ಒಪ್ಪಿಗೆ ನೀಡಿದೆ” ಎಂದು ವಿವರಿಸಿದರು.

ಪಿಎಸ್‌ಐ ಅಕ್ರಮ, ಎಸ್​ಟಿಐ ರಚಿಸಲು ಸಲಹೆ

“ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಬಿ.ವೀರಪ್ಪ ಸಮಿತಿ ರಚಿಸಿದ್ವಿ. ಈ ಸಂಬಂಧ ಬಿ.ವೀರಪ್ಪ ನೇತೃತ್ವದ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರಿ, ಖಾಸಗಿ ವ್ಯಕ್ತಿಗಳು ಸೇರಿ 113 ಜನರು ಭಾಗಿ ಎಂದು ವರದಿ ನೀಡಲಾಗಿದೆ. ಪ್ರಕರಣ ಸಂಬಂಧ ಎಸ್​ಟಿಐ ರಚಿಸಬೇಕೆಂದು ವೀರಪ್ಪ ಹೇಳಿದ್ದಾರೆ. ಹೆಚ್ಚುವರಿ ತನಿಖೆಗಾಗಿ ಎಸ್​ಐಟಿ‌ ರಚಿಸಲು ತೀರ್ಮಾನ ಮಾಡಿದ್ದೇವೆ” ಎಂದು ಸಚಿವರು ತಿಳಿಸಿದರು.

“ಕೆ.ಆರ್.ಪುರದ ಎನ್‌ಜಿಎಫ್​ನಲ್ಲಿ‌ಇರುವ ಜಾಗದಲ್ಲಿ ನಾನಾ ಪ್ರಪೋಸಲ್​ಗಳು ಬಂದಿವೆ. 65 ಎಕರೆ ಜಾಗ ಇದೆ. ಆ ಭಾಗದಲ್ಲಿ ದೊಡ್ಡ ಪಾರ್ಕ್ ಇಲ್ಲ. ಟ್ರೀ ಪಾರ್ಕ್ ಮಾಡ್ಬೇಕು, ವಾಕಿಂಗ್, ಸೈಕಲ್ ಟ್ರಾಕ್, ಆಟದ ಮೈದಾನ ಇರಲಿದೆ. ಕೈಗಾರಿಕಾ ಇಲಾಖೆ ವತಿಯಿಂದ ಕೆಲಸ ಆಗಲಿದೆ. ಟ್ರೀ ಪಾರ್ಕ್​​ಗೆ ಒಟ್ಟು 11 ಕೋಟಿ ರೂ. ವೆಚ್ಚ ಆಗಬಹುದೆಂದು‌ ಅಂದಾಜಿಸಲಾಗಿದೆ. 1500 ಕೋಟಿ ರೂ ಬೆಲೆ ಬಾಳುವ ಜಾಗ ಸಾರ್ವಜನಿಕರಿಗೆ ಮೀಸಲಿಡಲಾಗಿದೆ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X