ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರ ಶಿಫಾರಸಿನ ಮೇರೆಗೆ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶ ಹೊರಡಿಸಿದ್ದಾರೆ.
ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾಗಿ ಅಶೋಕ ಮಂದಾಲಿ ಅವರನ್ನು ನೇಮಕಗೊಳಿಸಿದ್ದಾರೆ.
ಸಮಿತಿಯ ಸದಸ್ಯರ ವಿವರ ಈ ಮುಂದಿನಂತಿದೆ. ಶಂಭು ಎಸ್ ಕಾಳೆ, ಮೀನಾಕ್ಷಿ ಬೆನಕಣ್ಣವರ, ಸಾವಿತ್ರಿ ಹೂಗಾರ, ದಯಾನಂದ ಪವಾರ, ಸಂಗು ಕೆರಕಲಮಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿಕಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡೆ, ಮಲ್ಲಪ್ಪ ಬಾರ್ಕೇರ, ಭಾಷಾ ಮಲ್ಲಸಮುದ್ರ, ಕೃಷ್ಣಗೌಡ ಎಚ್ ಪಾಟೀಲ ಅವರನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಗ್ಯಾರಂಟಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿ ನೇಮಕಗೊಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಶಿಕ್ಷಣದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ಬಿ ನಂಜುಂಡಪ್ಪ
ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರ ಆದೇಶದಲ್ಲಿ ತಿಳಿಸಿರುವಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಮಾಡಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.