ಧಾರವಾಡ | ಜಾನುವಾರುಗಳ ಆರೋಗ್ಯ ರಕ್ಷಣೆಗೆ ʼಪಶು ಸಖಿʼಗಳ ನೇಮಕ

Date:

Advertisements

ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೌಲಭ್ಯಗಳು ತಲುಪುವಂತೆ ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತೆಯರನ್ನು ನೇಮಿಸಿದಂತೆ, ಜಾನುವಾರು ಮತ್ತು ಇತರೇ ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಪಶು ಸಖಿಗಳನ್ನು ನೇಮಿಸಿದೆ.

ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ 144 ಪಶು ಸಖಿಯರನ್ನು ನೇಮಿಸಲಾಗಿದ್ದು, ಜಾನುವಾರುಗಳ ಕಲ್ಯಾಣಕ್ಕಾಗಿ ಸರ್ಕಾರದ ವಿವಿಧ ಯೋಜನೆಗಳು ಮತ್ತು ಪಶುಸಂಗೋಪನಾ ಇಲಾಖೆಯಿಂದ ಒದಗಿಸಲಾದ ಸೌಲಭ್ಯಗಳ ಬಗ್ಗೆ ಅವರು ಮಾಹಿತಿಯನ್ನು ರೈತರು,ಜಾನುವಾರು ಮಾಲೀಕರುಗಳಿಗೆ ತಲುಪಿಸಲಿದ್ದಾರೆ.

ಪ್ರತೀ ಗ್ರಾಮ ಪಂಚಾಯಿತಿಗೆ ಒಬ್ಬ ಪಶು ಸಖಿಯನ್ನು ನೇಮಿಸಲಾಗುತ್ತದೆ. ಇವರು ರೈತರು ಮತ್ತು ಪಶುಸಂಗೋಪನಾ ಇಲಾಖೆಯ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಇಲಾಖೆಯ ಇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಲಿದ್ದಾರೆ.

Advertisements

ಇಲಾಖೆಯಲ್ಲಿ ಅನೇಕ ಖಾಲಿ ಹುದ್ದೆಗಳು ಭರ್ತಿಯಾಗದೆ ಉಳಿದಿರುವುದರಿಂದ, ಸಿಬ್ಬಂದಿ ಕೊರತೆಯಿಂದ ಗ್ರಾಮೀಣ ಜನರ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದೆ. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪಶು ಸಖಿಯರನ್ನು ನೇಮಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ರವಿ ಸಾಲಗೌಡರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವ-ಸಹಾಯ ಗುಂಪುಗಳ ಒಕ್ಕೂಟವು ಪಶು ಸಖಿಯಾಗಿ ಸೇವೆ ಸಲ್ಲಿಸಲು ಒಬ್ಬರನ್ನು ಆಯ್ಕೆ ಮಾಡುತ್ತದೆ. ಅವರಿಗೆ ಇಲಾಖೆಯಿಂದ ಮೂರು ಹಂತಗಳಲ್ಲಿ ತರಬೇತಿ ನೀಡಲಾಗುತ್ತದೆ. ಪಶು ಸಖಿಗಳು ತಿಂಗಳಲ್ಲಿ 15 ದಿನ ಕೆಲಸ ಮಾಡಲಿದ್ದು, ಅವರಿಗೆ ಗೌರವ ಧನ ನೀಡಲಾಗುತ್ತದೆ.

ಗ್ರಾಮೀಣ ಜನರಿಗೆ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಪಶು ಸಖಿಗಳು ನೆರವಾಗಲಿದ್ದಾರೆ. ಅವರು ಜಾನುವಾರುಗಳಿಗೆ ಪ್ರಥಮ ಚಿಕಿತ್ಸೆ ನೀಡುತ್ತಾರೆ, ಮೇವಿನ ತರ್ಕಬದ್ಧ ಬಳಕೆ, ಲಸಿಕೆ ಮತ್ತು ಸಾಕುಪ್ರಾಣಿಗಳ ಆರೋಗ್ಯಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುತ್ತಾರೆ.

ಧಾರವಾಡ ತಾಲೂಕಿನಲ್ಲಿ 35 ಪಶು ಸಖಿಯರಿದ್ದರೆ, ಅಳ್ನವನರ 4, ಕಲಘಟಗಿ 28, ಹುಬ್ಬಳ್ಳಿ 26, ಕುಂದಗೋಳ 26, ಅಣ್ಣಿಗೇರಿ ತಾಲೂಕಿನಲ್ಲಿ ಒಂಬತ್ತು ಮತ್ತು ನವಲಗುಂದ ತಾಲೂಕಿನಲ್ಲಿ 16 ಮಂದಿ ಪಶು ಸಖಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಈ ಮೊದಲು ಕೇಳಿ ಬರುತ್ತಿದ್ದ ದೂರುಗಳು ಗಣನೀಯವಾಗಿ ಇಳಿಮುಖವಾಗಿವೆ ಎನ್ನುತ್ತಿದ್ದಾರೆ ಅಧಿಕಾರಿಗಳು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X