ಲೋಕಸಭಾ ಚುನಾವಣೆ | ರೈತರಿಗೆ 5 ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Date:

Advertisements

ಲೋಕಸಭಾ ಚುನಾವಣೆಗೆ ಭಾರೀ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌, ನಾನಾ ಕ್ಷೇತ್ರಗಳಿಗೆ ನಾನಾ ರೀತಿಯ ಗ್ಯಾರಂಟಿಗಳನ್ನು ನೀಡುತ್ತಿದೆ. ಯುವಜನರು, ಆದಿವಾಸಿಗಳು ಹಾಗೂ ಮಹಿಳೆಯರಿಗೆ ಈಗಾಗಲೇ ಗ್ಯಾರಂಟಿಗಳ ಭರವಸೆ ನೀಡಿರುವ ಕಾಂಗ್ರೆಸ್‌, ಇದೀಗ, ರೈತರಿಗೆ ಐದು ಭವರಸೆಗಳನ್ನು ಘೋಷಿಸಿದೆ

ಕೃಷಿ ಕ್ಷೇತ್ರಕ್ಕೆ ಗ್ಯಾರಂಟಿಗಳನ್ನು ಘೋಷಿಸಿ, ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, “ದೇಶದ ಎಲ್ಲ ಅನ್ನದಾತರಿಗೆ ನನ್ನ ನಮನ! ಕಾಂಗ್ರೆಸ್ ನಿಮಗಾಗಿ 5 ಭರವಸೆಗಳನ್ನು ತಂದಿದೆ. ಈ ಭರವಸೆಗಳು ನಿಮ್ಮ ಎಲ್ಲ ಸಮಸ್ಯೆಗಳನ್ನು ಅವುಗಳ ಮೂಲದಿಂದ ತೊಡೆದು ಹಾಕುತ್ತವೆ” ಎಂದಿದ್ದಾರೆ.

ರೈತರಿಗೆ ಕಾಂಗ್ರೆಸ್‌ ಭರವಸೆಗಳು ಹೀಗಿವೆ:

Advertisements
  1. ಸ್ವಾಮಿನಾಥನ್ ಆಯೋಗದ ಸೂತ್ರದ ಅಡಿಯಲ್ಲಿ MSPಗೆ ಕಾನೂನು ಸ್ಥಾನಮಾನ.
  2. ರೈತರ ಸಾಲ ಮನ್ನಾ ಮಾಡಲು ಮತ್ತು ಸಾಲ ಮನ್ನಾ ಪ್ರಮಾಣವನ್ನು ನಿರ್ಧರಿಸಲು ಶಾಶ್ವತ ‘ಕೃಷಿ ಸಾಲ ಮನ್ನಾ ಆಯೋಗ’ ರಚನೆ.
  3. ವಿಮಾ ಯೋಜನೆಯನ್ನು ಬದಲಾಯಿಸುವ ಮೂಲಕ ಬೆಳೆ ನಷ್ಟವಾದಲ್ಲಿ 30 ದಿನಗಳೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಪರಿಹಾರ ಪಾವತಿ.
  4. ರೈತರ ಹಿತಾಸಕ್ತಿಯನ್ನು ಮುಂದಿಟ್ಟುಕೊಂಡು ಹೊಸ ಆಮದು-ರಫ್ತು ನೀತಿ ರಚನೆ.
  5. ಕೃಷಿ ಉತ್ಪನ್ನಗಳಿಂದ ಜಿಎಸ್‌ಟಿಯನ್ನು ತೆಗೆದುಹಾಕುವ ಮೂಲಕ ರೈತರನ್ನು ಜಿಎಸ್‌ಟಿ ಮುಕ್ತವನ್ನಾಗಿ ಮಾಡುವುದು.

ಕಾಂಗ್ರೆಸ್ ಭರವಸೆ1

“ತಮ್ಮ ಬೆವರಿನಿಂದ ನಾಡಿನ ಮಣ್ಣಿಗೆ ನೀರುಣಿಸುವ ರೈತರ ಬದುಕು ಹಸನುಗೊಳಿಸುವುದು ಕಾಂಗ್ರೆಸ್‌ನ ಉದ್ದೇಶವಾಗಿದೆ. ನಮ್ಮ 5 ಐತಿಹಾಸಿಕ ನಿರ್ಧಾರಗಳು ಆ ನಿಟ್ಟಿನಲ್ಲಿ ಕೈಗೊಂಡ ಹೆಜ್ಜೆಗಳಾಗಿವೆ. ಭಾರತದ ಕೃಷಿ ವ್ಯವಸ್ಥೆಯಲ್ಲಿ ‘ಸಮೃದ್ಧಿಯ ಸೂರ್ಯ’ ಉದಯಿಸಲಿದೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X