ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿದ್ದ ಮಾಝ್ ಮುನೀರ್ ನನ್ನು 7 ದಿನ ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದನು. ಇದೀಗ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಎನ್‌ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮಾಡ್ಯೂಲ್ಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಇರುವುದು ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿ, ಮಗನಿಗೆ ನಿಂದನೆ; ಸ್ಕ್ರೂ ಡ್ರೈವರ್‌ನಿಂದ ಉದ್ಯಮಿ ಕೊಲೆ
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದು 15 ದಿನ ಕಳೆದರೂ ಆರೋಪಿಯ ಸುಳಿವು ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಅಧಿಕಾರಿಗಳು ಆರೋಪಿಯ ಫೋಟೋಗಳನ್ನು ಬಿಡುಗಡೆ ಮಾಡಿ ಆತನ ಬಗ್ಗೆ ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಎನ್ಐಎ ತಿಳಿಸಿದೆ.