ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರೋಪಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಅವರನ್ನು ಹಣಿಯಲು ಯಾರೋ ಮಾಡಿರುವ ತಂತ್ರವಿದು” ಎಂದರು.
“ಯಡಿಯೂರಪ್ಪ ವಿರುದ್ಧ ಬೆಂಗಳೂರಿನಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿರುವ ವಿಚಾರ ನನ್ನ ಕಿವಿಗೂ ಬಿದ್ದಿದೆ. ನನಗೆ ಚೆನ್ನಾಗಿ ಗೊತ್ತಿದೆ. ಅವರನ್ನು ಬಹಳ ಹಿಂದಿನಿಂದಲೂ ನೋಡಿಕೊಂಡು ಬಂದಿದ್ದೇನೆ. ಅವರ ಸ್ವಭಾವದ ಬಗ್ಗೆ ನನಗೆ ಗೊತ್ತಿದೆ. ಇದೊಂದು ಷಡ್ಯಂತ್ರ ಎಂಬದು ಸ್ಪಷ್ಟ” ಎಂದು ಆರೋಪಿಸಿದರು.
“ಆರೋಪದಿಂದ ಯಡಿಯೂರಪ್ಪ ಮುಕ್ತರಾಗಿ ಹೊರಗೆ ಬರುತ್ತಾರೆ” ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
