ಹಾಸನ | ಮಾಜಿ ಶಾಸಕರ ಬಂದೂಕು ಪರವಾನಗಿ ರದ್ದು; ಆದೇಶ ಹಿಂಪಡೆಯಲು ಆಗ್ರಹ

Date:

Advertisements
  • ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ವತಿಯಿಂದ ಮನವಿ ಸಲ್ಲಿಕೆ
  • ಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ  

ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ ಈ ಬಾರಿಯ ವಿಧಾನಸಭಾ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿ ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ಹೇಳಿದೆ. ಹಾಸನ ಜಿಲ್ಲೆಯ ಸಕಲೇಶಪುರ ಉಪವಿಭಾಗಾಧಿಕಾರಿಗೆ ಸಂಘಟನೆಯ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ.

“ಎಚ್.ಎಂ ವಿಶ್ವನಾಥ್‌ 2004ರಿಂದ 2008ರ ವರೆಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಅವರ ಅವಧಿಯಿಂದಲೂ ಈ ಭಾಗದಲ್ಲಿ ಕಾಡಾನೆ ಸಮಸ್ಯೆ ಇದ್ದು, ಅಲ್ಲಿಂದ ಈವರೆಗೂ ಸಾಕಷ್ಟು ಸಾವು-ನೋವುಗಳು ಸಂಭವಿಸಿವೆ. ಮಲೆನಾಡು ಭಾಗದ ಕಾಡಾನೆ ಸಮಸ್ಯೆ ಬಗ್ಗೆ ಅವರು ಸತತವಾಗಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ಗಮನಸೆಳೆಯುತ್ತಲೇ ಬಂದಿದ್ದಾರೆ” ಎಂದು ಮನವಿ ಪತ್ರದಲ್ಲಿ ಕಾಫಿ ಬೆಳೆಗಾರರು ಉಲ್ಲೇಖಿಸಿದ್ದಾರೆ.

“ಮಲೆನಾಡು ಭಾಗದಲ್ಲಿ ಕಾಡಾನೆ ಮತ್ತು ಇತರೆ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಡಾನೆ ದಾಳಿಗೆ ಈವರೆಗೆ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದಲ್ಲಿ ಬೆಳೆಹಾನಿ ಉಂಟಾಗುತ್ತಲೇ ಇದೆ” ಎಂದು ವಿವರಿಸಿದ್ದಾರೆ.

Advertisements

“ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಪ್ರಸ್ತುತ ಅಂದಾಜು 80 ರಿಂದ 90 ಕಾಡಾನೆಗಳು ಬೀಡು ಬಿಟ್ಟಿವೆ. ಕಾಡಾನೆ ಹಾವಳಿಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ ತೀವ್ರಗೊಳ್ಳುತ್ತಿದಂತೆ ಕಳೆದ ಎರಡು ವರ್ಷಗಳಿಂದ ಆನೆಗಳ ಚಲನವಲನ ತಿಳಿದು ಜನರಿಗೆ ಮಾಹಿತಿ ನೀಡಲು ಆರ್ ಆರ್ ಟಿ ಮತ್ತು ಟಾಸ್ಕ್ ಫೋರ್ಸ್ ಎಂಬ ಪಡೆಗಳನ್ನು ನೇಮಿಸಲಾಗಿದೆ. ಆದರೆ, ಅವರು ಕಾಡಾನೆ ಹಾವಳಿ ನಿಯಂತ್ರಿಸಲು ವಿಫಲವಾಗಿದ್ದು, ಹಿಡುವಳಿ ಜಮೀನಿನಲ್ಲಿ ರೈತರು ಬೆಳೆದ ಬೆಳೆಯನ್ನು ಕಾಡಾನೆಗಳಿಂದ ಮೇಯಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಬೇಸತ್ತು ಹೋರಾಟ ತೀವ್ರಗೊಂಡ ಬಳಿಕ ಸರ್ಕಾರ ನೇಮಿಸಿದ್ದ ಸಮಿತಿಯ ಸಕಲೇಶಪುರಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಭೆಯಲ್ಲಿ ಕಾಡಾನೆಗಳ ಹಾವಳಿಯಿಂದ ಬೇಸತ್ತು ಭಾವನಾತ್ಮಕವಾಗಿ ಮಾತನಾಡುವ ವೇಳೆ “ನನ್ನ ತೋಟದಲ್ಲಿ ಕಾಡಾನೆಗಳಿದ್ದು, ನನ್ನ ಮೇಲೆ ದಾಳಿಗೆ ಮುಂದಾದರೆ ಆತ್ಮರಕ್ಷಣೆಗಾಗಿ ಗುಂಡು ಹೊಡೆಯುತ್ತೇನೆ” ಎಂದು ಹೇಳಿದ್ದರು. ಬಳಿಕ ಬಂದೂಕು ಲೈಸೆನ್ಸ್‌ ರದ್ಧು ಮಾಡಿ ಬಂದೂಕನ್ನು ಠೇವಣಿ ಇರಿಸಿಕೊಳ್ಳಲಾಗಿತ್ತು” ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ

“ಈ ಬಗ್ಗೆ ಮುಖ್ಯಮಂತ್ರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಮೌಖಿಕವಾಗಿ ಸೂಚನೆ ನೀಡಿದ್ದರೂ ಮಾಜಿ ಶಾಸಕ ಎಚ್ ಎಂ ವಿಶ್ವನಾಥ್‌ ಅವರ ಲೈಸೆನ್ಸ್ ಮತ್ತು ಬಂದೂಕನ್ನು ಅಮಾನತು ಮಾಡಿರುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ವಿಷಯವು ಬೆಳೆಗಾರರ ಭಾವನೆಗಳಿಗೆ ಧಕ್ಕೆಯುಂಟುಮಾಡುತ್ತಿದ್ದು, ತಕ್ಷಣವೇ ಆದೇಶವನ್ನು ಹಿಂಪಡೆದು ಪಡೆದು ಸಾರ್ವಜನಿಕವಾಗಿ ಮಲೆನಾಡಿನಲ್ಲಿ ಶಾಂತಿಯಿಂದ ಬದುಕಲು ಅವರ ಲೈಸೆನ್ಸ್ ಮತ್ತು ಬಂದೂಕನ್ನು ವಾಪಾಸ್ ನೀಡಬೇಕೆಂದು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಒತ್ತಾಯಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆ.ಜಿ.ಎಫ್ (ಕರ್ನಾಟಕ ಬೆಳೆಗಾರರ ಒಕ್ಕೂಟ)ದ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಲೋಹಿತ್ ಕೌಡಹಳ್ಳಿ, ಎಚ್.ಡಿ.ಪಿ.ಎ ಕಾರ್ಯದರ್ಶಿ ಎಂ ಬಿ ರಾಜೀವ್, ಕಾಫಿ ಬೆಳೆಗಾರರದ ಬಿರಡಹಳ್ಳಿ ಮದನ್, ಹಾನುಬಾಳ್ ಚೇತನ್, ಹಲಸುಲಿಗೆ ರಮೇಶ್ ಹಾಗೂ ಇತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X