ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಕಾರ್ ಬಾಗಿಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಬೆಂಗಳೂರಿನ ತಿಲಕನಗರದಲ್ಲಿ ನಡೆದಿದೆ.
ನಿಮ್ಹಾನ್ಸ್‌ನ ಡಿ ಗ್ರೂಪ್ ನೌಕರ ವೆಂಕಟೇಶ್ (53) ಮೃತರು. ಬೆಂಗಳೂರಿನ ತಿಲಕ್‌ನಗರದ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮೃತ ವೆಂಕಟೇಶ್ ಅವರು ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತರಳುತ್ತಿದ್ದರು. ಈ ವೇಳೆ, ರಸ್ತೆ ಬದಿ ನಿಂತಿದ್ದ ಕಾರಿನೊಳಗಿದ್ದವರು ದಿಢೀರ್ ಬಾಗಿಲು ತೆರೆದಿದ್ದಾರೆ.
ಇದರಿಂದ ಕಾರಿನ ಬಾಗಿಲು ವೆಂಕಟೇಶ್ ಅವರ ತಲೆಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಮೃತಪಟ್ಟಿದ್ದಾರೆ.
ಈ ಕುರಿತು ಮೈಕೊಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ
ನಮ್ಮ ಮೆಟ್ರೋ | ಮಹಿಳಾ ಸಿಬ್ಬಂದಿಗೆ ಕಿರುಕುಳ : ನಿಲ್ದಾಣದ ಅಧಿಕಾರಿ ವಿರುದ್ದ ದೂರು ದಾಖಲು
ರಾಜಾಜಿನಗರ ಮೆಟ್ರೋ ನಿಲ್ದಾಣದ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ, ಮಹಿಳಾ ಭದ್ರತಾ ಸಿಬ್ಬಂದಿ ಮೆಟ್ರೋ ನಿಲ್ದಾಣದ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ.
ರಾಜಾಜಿನಗರ ಮೆಟ್ರೋ ನಿಲ್ದಾಣದ ಅಸಿಸ್ಟೆಂಟ್ ಸೆಕ್ಷನ್ ಅಧಿಕಾರಿ ಗಜೇಂದ್ರ ಪಿ. ಮಹಿಳಾ ಸಿಬ್ಬಂದಿಗೆ ಅಶ್ಲೀಲ ಪದಬಳಕೆ, ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಸಹಕರಿಸದಿದ್ದರೆ ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳಾ ಭದ್ರತಾ ಸಿಬ್ಬಂದಿ ಆರೋಪಿಸಿದ್ದಾರೆ.
ಮಹಿಳಾ ಭದ್ರತಾ ಸಿಬ್ಬಂದಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಮಹಿಳಾ ಭದ್ರತಾ ಸಿಬ್ಬಂದಿ ದೂರಿನ ಮೇರೆಗೆ ಮೆಟ್ರೋ ಅಧಿಕಾರಿ ಗಜೇಂದ್ರ ಪಿ. ವಿರುದ್ಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.