ತುಮಕೂರು | ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಪರಮೇಶ್ವರ್

Date:

Advertisements

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಗೃಹಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ಮಾರ್ಟ್ ಸಿಟಿಯಿಂದ ಸುಮಾರು ₹8.78 ಕೋಟಿ ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿವೆ. ಈ ಅವಧಿಯಲ್ಲಿ ನಮ್ಮ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಯ ಭರವಸೆಯನ್ನೂ ಈಡೇರಿಸಿದೆ. ಈ ಗ್ಯಾರಂಟಿ ಯೋಜನೆಗಳಿಗಾಗಿ ₹36 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ. ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆಂಬ ವಿಶ್ವಾಸ ನಮ್ಮಲ್ಲಿದೆ” ಎಂದರು.

Advertisements

“ನಮ್ಮ ಪಕ್ಷದಲ್ಲಿ ಇನ್ನು 21 ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ. ಈ ಸಂಬಂಧ ಈಗಾಗಲೇ ಅಂತಿಮ ಸುತ್ತಿನ ಚರ್ಚೆ ನಡೆದು ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಕೂಡ ಮಾಡಲಾಗಿದೆ. ಕೇಂದ್ರ ಚುನಾವಣಾ ಕಮಿಟಿ ಮುಂದೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿಗಳು ಅಭ್ಯರ್ಥಿಗಳ ಹೆಸರುಗಳನ್ನು ಮಂಡಿಸುತ್ತಾರೆ. ಇನ್ನೆರಡು ದಿನಗಳಲ್ಲಿ ಟಿಕೆಟ್ ಪಟ್ಟಿ ಘೋಷಣೆಯಾಗಲಿದೆ” ಎಂದರು.

ರಾಜ್ಯಕ್ಕೆ ರಾಹುಲ್‌ಗಾಂಧಿ ಭೇಟಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, “ರಾಹುಲ್‌ಗಾಂಧಿಯವರ ಷೆಡ್ಯುಲ್ ಪಟ್ಟಿ ಬಿಡುಗಡೆಯಾಗಿಲ್ಲ. ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ಅವರ ಷೆಡ್ಯುಲ್ ಕೂಡ ಇನ್ನೂ ಬಿಡುಗಡೆಯಾಗಿಲ್ಲ. ಅವರ ಪ್ರಚಾರದ ವೇಳಾಪಟ್ಟಿ ಬಂದ ಬಳಿಕ ಕೆಪಿಸಿಸಿ ಅಧ್ಯಕ್ಷರು ಅದನ್ನು ಪ್ರಕಟಿಸುತ್ತಾರೆ” ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ, “ನಮ್ಮಲ್ಲಿ ಸದ್ಯಕ್ಕೆ ಆ ವಿಚಾರದ ಬಗ್ಗೆ ಪ್ರಸ್ತಾಪ ಇಲ್ಲ. ನಮ್ಮ ಇಂಡಿಯಾ ಒಕ್ಕೂಟದ ಎಲ್ಲ ಪಕ್ಷಗಳೂ ಸೇರಿ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ತೀರ್ಮಾನ ಮಾಡುತ್ತವೆ” ಎಂದರು.

“ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲಿನ ಪೋಕ್ಸೊ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇವೆ. ಸುಖಾ ಸುಮ್ಮನೆ ಗೊಂದಲ ಆಗಬಾರದೆಂಬ ಉದ್ದೇಶದಿಂದ ಈ ಪ್ರಕರಣವನ್ನು ಸಿಐಡಿಗೆ ಕೊಟ್ಟಿದ್ದೇವೆ. ಈಗಾಗಲೇ ಯಡಿಯೂರಪ್ಪನವರೂ ಕೂಡ ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾರೆ. ದೂರು ಕೊಟ್ಟಿರುವ ಮಹಿಳೆ ಸುಮಾರು 50 ಪೋಕ್ಸೊ ಪ್ರಕರಣ ದಾಖಲು ಮಾಡಿದ್ದಾರೆಂಬ ಮಾಹಿತಿ ಇದೆ” ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕಾಂಗ್ರೆಸ್‌ ಮುಖಂಡನ ಮೇಲೆ ಗುಬ್ಬಿ ಶಾಸಕ ಶ್ರೀನಿವಾಸ್ ಹಲ್ಲೆ; ಪ್ರಕರಣ ದಾಖಲು

ತುಮಕೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಶ್ರೀನಿವಾಸ್ ಹಲ್ಲೆ ನಡೆಸಿರುವ ವಿಚಾರದ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಏನೋ ಗುತ್ತಿಗೆ ವಿಚಾರದಲ್ಲಿ ಇವರಿಬ್ಬರ ನಡುವೆ ಗಲಾಟೆಯಾಗಿದೆಯೆಂದು ನನಗೆ ಮಾಹಿತಿ ಬಂದಿದೆ. ಈಗ ಅವರವರೇ ಸರಿ ಹೋಗಿದ್ದಾರೆ. ಏನೂ ಸಮಸ್ಯೆ ಇಲ್ಲ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X