ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಶನಿವಾರ ಘೋಷಣೆ ಮಾಡಿದ್ದಾರೆ.
“ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮಾಡಲಾಗುತ್ತದೆ. ಲೋಕಸಭಾ ಚುನಾವಣೆ ವೇಳೆಯೇ ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಅದರಲ್ಲಿ ಉತ್ತರ ಕರ್ನಾಟಕದಲ್ಲಿ ಮೇ 7ಕ್ಕೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಇದೇ ವೇಳೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷ, ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ
ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಫೆಬ್ರವರಿಯಲ್ಲಿ ಹೃದಯಾಘಾತದಿಂದ ನಿಧನರಾದ್ದರಿಂದ ತೆರವಾದ ಶಾಸಕ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯಲಿದೆ.