ದಾವಣಗೆರೆ | ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಘೋಷಣೆಗೆ ಭಾರೀ ವಿರೋಧ

Date:

Advertisements

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಸಂಸದ ಜಿ ಎಂ ಸಿದ್ದೇಶ್ವರ ಅವರ ಧರ್ಮಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿರುವುದರಿಂದ ಬಿಜೆಪಿಯಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಮತ್ತು ಮುಖಂಡರು ಪತ್ರಿಕ ಹೇಳಿಕೆ ನೀಡಿದ್ದು, “ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸುವಂತೆ ಬಿಜೆಪಿ ಹೈಕಮಾಂಡ್ ಗಮನ ಸೆಳೆಯಲು ಮಾಜಿ ಸಚಿವ ರೇಣುಕಾಚಾರ್ಯ ಮತ್ತು ತಂಡದಿಂದ ಮಾಜಿ ಸಚಿವ ಎಸ್‌ ಎ ರವೀಂದ್ರನಾಥ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಬಳಿಕ ʼಸಿದ್ದೇಶ್ ಹಠಾವೋ ಬಿಜೆಪಿ ಬಚಾವೋ. ಗೋ ಬ್ಯಾಕ್ ಸಿದ್ದೇಶ್ʼ ಎಂಬ ಘೋಷಣೆ ಕೇಳಿಬಂದಿದೆ. ಬಿಜೆಪಿಯ ಒಬ್ಬ ಕಾರ್ಯಕರ್ತ ಸಂಸದ ಸಿದ್ದೇಶ್ವರ ಅವರ ಪತ್ನಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ಪೆಟ್ರೋಲ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ” ಎಂದು ತಿಳಿಸಿದ್ದಾರೆ.

“ಇದೆನ್ನೆಲ್ಲ ಸೂಕ್ಷ್ಮವಾಗಿ ಗಮನಿಸುತ್ತಿರುವ ಎನ್‌ಡಿಎ ಮಿತ್ರ ಪಕ್ಷ ಜೆಡಿಎಸ್‌ನವರು ಗಂಭೀರವಾಗಿ ಪರಿಗಣಿಸಿ ಕೆಲ ಪ್ರಮುಖ ನಾಯಕರು ಒಂದು ಹಂತಕ್ಕೆ ಬಂದಿದ್ದು, ಬಿಜೆಪಿಯ ಬಣಗಳ ರಾಜಕೀಯ ನಿಲ್ಲಿಸಿ, ಗೆಲುವು ಗುರಿಯಾಗಿಸಿ ಪರ್ಯಾಯವಾಗಿ ವೀರಶೈವ ಪಂಚಮಸಾಲಿ ಸಮಾಜಕ್ಕೆ ಸೇರಿದ ದಾವಣಗೆರೆ ಜಿಲ್ಲೆಯ ಪ್ರಥಮ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ. ಎಚ್ ಶಿವಪ್ಪನವರ ಪುತ್ರ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಅವರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿ ಮಾಡಿದರೆ ಗೆಲುವು ಖಚಿತ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisements

“ಜಿಲ್ಲೆಯಲ್ಲಿ ಮಾಜಿ ಶಾಸಕ ಶಿವಶಂಕರ್ ಅವರು ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ. ಅವರ ತಂದೆ ಸಚಿವರಾಗಿ ತಾವು ಆಗ್ನೇಯ ಪದವಿಧರರ ಕ್ಷೇತ್ರದ ಪರಿಷತ್ ಸದಸ್ಯರಾಗಿ ಹರಹರ ಶಾಸಕರಾಗಿ ಆನೇಕ ಜನಪರ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಎಲ್ಲ ಸಮಾಜದವರ ಜೋತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಿಂದ ಈ ಎಲ್ಲ ವಿಷಯಗಳು ಎನ್‌ಡಿಎ ಕೂಟದ ನಾಯಕರ ಗಮನಕ್ಕೆ ತಂದು ದಾವಣಗೆರೆ ಲೋಕಸಭಾ ಚುನಾವಣೆಗೆ ಎನ್‌ಡಿಎ ಕೂಟದ ಅಭ್ಯರ್ಥಿಯನ್ನಾಗಿ ಶಿವಶಂಕರ್ ಅವರನ್ನು ಘೋಷಿಸಲು ಒತ್ತಾಯಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಾಮಾಜಿಕ ಭದ್ರತೆ ಯೋಜನೆಗಳ ನಿಯಮ ಸಡಿಲಿಸಿ ಮಾಸಿಕ ₹5,000ಕ್ಕೆ ಹೆಚ್ಚಿಸುವಂತೆ ಆಗ್ರಹ

ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳಲು ವೀರಶೈವ, ಪಂಚಮಸಾಲಿ ಸಮಾಜದವರ ಮಹತ್ತರವಾದ ಪಾತ್ರ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರೆ ಇಷ್ಟು ದೊಡ್ಡ ಸಮಾಜಕ್ಕೆ ಜಿಲ್ಲೆಯಲ್ಲಿ ಒಬ್ಬ ಶಾಸಕ ಅಥವಾ ಸಂಸದ ಇಲ್ಲದೇ ಇರುವುದು ಸಹಜವಾಗಿ ಸಮಾಜದ ಒಳಗೆ ನೋವಿದೆ. ಇದೆಲ್ಲಾ ಸರಿಹೋಗಬೇಕಾದರೆ ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಎನ್‌ಡಿಎ ಕೂಟದ ಬಿಜೆಪಿ ಅಥವಾ ಜೆಡಿಎಸ್‌ನಿಂದ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್ ಅವರನ್ನು ಅಭ್ಯರ್ಥಿ ಮಾಡಿದರೆ ಮಾತ್ರ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧ್ಯವಿದೆ. ವೀರಶೈವ ಪಂಚಮಸಾಲಿ ಸಮಾಜಕ್ಕೆ ಬಿಜೆಪಿಯಿಂದ ಒಂದು ನ್ಯಾಯ ಸಿಗಬಹುದೇನೋ” ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಟಿ.ಅಸ್ಗರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X