2024ರ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾದ ಬೆನ್ನಲ್ಲೇ, ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು ₹20 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ಹೈ ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುವ ಹಣದ ಮೇಲೆ ಕಣ್ಣಿಟ್ಟಿದ್ದಾರೆ. ಅದರಂತೆನೇ ಬೆಂಗಳೂರು ಮತ್ತು ನೆಲಮಂಗಲದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರು ಪರಿಶೀಲನೆ ವೇಳೆ ಹಣ ಪತ್ತೆಯಾಗಿದೆ. ಕಾರಿನಲ್ಲಿ ಸಾಗಿಸುತ್ತಿದ್ದ ₹13 ಲಕ್ಷ ಹಣವನ್ನು ಅಶೋಕನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಜಾಸ್ ಟೋಲ್ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹7 ಲಕ್ಷ ಹಣವನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶೇ.95ರಷ್ಟು ಖಾಸಗಿ ನೀರಿನ ಟ್ಯಾಂಕರ್ ನೋಂದಣಿ ಕಾರ್ಯ ಪೂರ್ಣ: ಜಲಮಂಡಳಿ ಅಧ್ಯಕ್ಷ
ಕಾರಿನಲ್ಲಿದ್ದ ತಮಿಳುನಾಡಿನ ಉದ್ಯಮಿ ರಘುಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಘುಪತಿ ಬೆಂಗಳೂರಿನಿಂದ ತುಮಕೂರು ಮಾರ್ಗದಲ್ಲಿ ತೆರಳುತ್ತಿದ್ದರು. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.