ದಾವಣಗೆರೆ | ಮೋದಿ ಸುಳ್ಳಿನ ಕಂತೆ ಹೊತ್ತು ತರುತ್ತಿದ್ದಾರೆ: ಎಎಪಿ

Date:

Advertisements

2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಯ ಪ್ರಚಾರದಲ್ಲಿ ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿದ್ದ ಕಪ್ಪು ಹಣವನ್ನು ಭಾರತಕ್ಕೆ ತಂದರೆ ಪ್ರತಿ ಭಾರತೀಯನಿಗೆ 15 ಲಕ್ಷ ಕೊಡಬಹುದು ಎಂದು ಹೇಳಿದ್ದು, ಯಾಕೆ ತರಲಿಲ್ಲ. ಪ್ರತೀ ವರ್ಷ 2ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಿದ್ದು, ಬದಲು ನಿರುದ್ಯೋಗ ಪ್ರಮಾಣವು ಪ್ರಮಾಣವು ಹೆಚ್ಚಾಗಿದೆ. ರೈತರ ಆದಾಯ ದ್ವಿಗುಣ ಆಗಲಿಲ್ಲ ಎಂದು ಆರೋಪಿಸಿದರು.

ಭೇಟಿ ಪಡಾವೋ, ಭೇಟಿ ಬಚಾವೋ ಎಂದು ಹೇಳುವ ನೀವು ದೇಶದ ಹೆಣ್ಣು ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿಲ್ಲ. ಬ್ಲ್ಯಾಕ್ ಮನಿ ಇದೆ ಎಂದು ನೋಟ್ ಬ್ಯಾನ್ ಮಾಡಿದ ನಂತರ ಎಷ್ಟು ಬ್ಲಾಕ್ ಮನಿ ಇದೆ ಅಂತಾ ಬಹಿರಂಗ ಪಡಿಸಲು ಮುಂದಾಗಲಿಲ್ಲ. ವಂಶ ಪಾರಂಪರ್ಯವಾಗಿ ರಾಜಕೀಯ ಮಾಡಲು ಬಿಡುವುದಿಲ್ಲ ಎಂದು ಹೇಳಿ. ನಿಮ್ಮ ಪಕ್ಷದಲ್ಲೇ ವಂಶ ಪಾರಂಪರ್ಯ ಪದ್ಧತಿ ಮುಂದುವರೆಸುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದರು.

Advertisements

ದೇಶದ ನಿರಾಶ್ರಿತ ನಾಗರೀಕರಿಗೆ ಮನೆಗಳು ನಿರ್ಮಾಣ ಆಗಲಿಲ್ಲ. ಚುನಾವಣಾ ಬಾಂಡ್ ನೆಪದಲ್ಲಿ ಭ್ರಷ್ಟಾಚಾರ ಬೆಳೆಯಲು ಕಾರಣವಾಗಿದ್ದೀರಿ. ಹಸಿವು ಮುಕ್ತ ರಾಷ್ಟ್ರಗಳ ಪೈಕಿ ಭಾರತ 111ನೇ ಸ್ಥಾನಕ್ಕೆ ಬಂದಿದೆ. ಇದೇನಾ ನಿಮ್ಮ ಶ್ರಮದ ಸಾಧನೆ. ಮಹಾದಾಯಿ, ಭದ್ರಾ ಮೇಲ್ದಂಡೆ ಯೋಜನೆಗೆ ನೀಡಿದ ಭರವಸೆಗಳೇ ಸುಳ್ಳಾಗಿವೆ. ಇದೇ ರೀತಿ ಎಲ್ಲಾ ರೀತಿಯ ಸುಳ್ಳುಗಳನ್ನು ಹೇಳುತ್ತಾ ಈ ಬಾರಿಯೂ ದೇಶದ ಜನತೆಯನ್ನು ವಂಚಿಸಲು ಮುಂದಾಗಿದ್ದಾರೆ ಆಕ್ರೋಶ ಎಂದು ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಆದಿಲ್ ಖಾನ್, ಸಿ.ಆರ್. ಅರುಣ್ ಕುಮಾರ್, ಧರ್ಮನಾಯ್ಕ ಇತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

Download Eedina App Android / iOS

X