ಜೂನ್‌ವರೆಗೂ ಸಾಕಾಗುವಷ್ಟು ನೀರು ಸಂಗ್ರಹ, ತಜ್ಞರ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Date:

Advertisements

ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದು, ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರು ಸಂಗ್ರಹ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಸುದೀರ್ಘವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

“ಕೆಆರ್‌ಎಸ್‌ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ. 14,000 ಸರ್ಕಾರಿ ಬೋರ್ ವೆಲ್‌ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 MLD ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗುತ್ತಿದೆ” ಎಂದರು.

Advertisements

“313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು. ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ KMF ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ” ಎಂದು ಹೇಳಿದರು

“ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರು‌ಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ. ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ, ಶುದ್ದೀಕರಿಸಿದ ನೀರು ಬಳಸುವಂತೆ ಸೂಚನೆ ನೀಡಲಾಗಿದೆ” ಎಂದರು.

ತಜ್ಞರ ಸಮಿತಿ ರಚಿಸಲು ಕ್ರಮ

“ಬತ್ತಿ ಹೋಗಿರುವ ಪ್ರಮುಖ 14 ಕೆರೆಗಳನ್ನು ಭರ್ತಿ ಮಾಡಲು ಸೂಚನೆ ನೀಡಲಾಗಿದೆ. ಇದರಿಂದ ಅಂತರ್ಜಲ ಭರ್ತಿ ಆಗಿ ಬೋರ್ ವೆಲ್ ಗಳಿಗೆ ಮರುಜೀವ ಬರುತ್ತದೆ. ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ. ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ. ಭವಿಷ್ಯದಲ್ಲಿ ಎಂಥಾದ್ದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿ ರಚಿಸಲು ಕ್ರಮ ಕೈಗೊಳ್ಳಲಾಗಿದೆ. ದೂರು ಬಂದರೆ BBMP, BWSSB ನವರು ಹೊಣೆ ಎಂದು ಸ್ಪಷ್ಟವಾಗಿ ಹೇಳಲಾಗಿದೆ” ಎಂದು ವಿವರಿಸಿದರು.

“ಕೇಂದ್ರೀಯ ಸಹಾಯವಾಣಿ ಸಂಖ್ಯೆ 1916 ಹಾಗೂ ವಾಟ್ಸಾಪ್ ಮೂಲಕ ದೂರು ದಾಖಲಿಸಬಹುದು. ಈ ದೂರುಗಳನ್ನು ಕೂಡಲೇ ಬಗೆಹರಿಸಬೇಕು” ಎಂದರು.

ಮೋದಿಯವರಿಗೆ ಆರೋಪಿಸುವ ನೈತಿಕತೆ ಇಲ್ಲ

ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಬರಗಾಲ ಬಂದು ಐದು ತಿಂಗಳಾಯ್ತು. ಮೋದಿಯವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಒಂದೇ ಒಂದು ಪೈಸೆ ಹಣ ಕೊಟ್ಟಿಲ್ಲ. ಏಕೆ? 18171 ಕೋಟಿ ಬರ ಪರಿಹಾರ ಹಣ ಕೇಳಿದ್ವಿ. ಒಂದು ರೂಪಾಯಿಯನ್ನೂ ಕೊಡಲಿಲ್ಲ, 48 ಸಾವಿರ ಹೆಕ್ಟೇರ್ ನಲ್ಲಿ ಬೆಳೆ ಹಾನಿ ಆಗಿದೆ. ಬರ ಪರಿಹಾರ ಕೊಡಿ ಅಂದ್ವಿ ಕೊಡಲಿಲ್ಲ. ಮತ್ತೆ ಮೋದಿಯವರಿಗೆ “ನಮ್ಮಲ್ಲಿ ಹಣ ಇಲ್ಲ” ಎಂದು ಆರೋಪಿಸುವ ಯಾವ ನೈತಿಕತೆ ಇದೆ” ಎಂದು ಪ್ರಶ್ನಿಸಿದರು

“ಕೇಂದ್ರದಿಂದ ನಯಾಪೈಸೆ ಬರದಿದ್ದರೂ ನಾವು ರಾಜ್ಯ ಬೊಕ್ಕಸದಿಂದಲೇ ರೈತರ ಖಾತೆಗೆ ಬರ ಪರಿಹಾರ ಹಾಕಿದ್ದೇವೆ. ಬರಗಾಲದಲ್ಲಿ ನರೇಗಾ ದಿನಗಳನ್ನು ಹೆಚ್ಚಿಸಿ ಎಂದು ಕೇಳಿದ್ವಿ. ಇವತ್ತಿನವರೆಗೂ ಮಾಡಿಲ್ಲ. ಕೇಂದ್ರ ಸರ್ಕಾರ ಅಂದರೆ ಕೇವಲ GST ತಗೊಳೋಕೆ, ತೆರಿಗೆ ಸಂಗ್ರಹಿಸಿ ತಮ್ಮಲ್ಲಿ ಇಟ್ಟುಕೊಂಡು ರಾಜ್ಯಗಳಿಗೆ ಅನ್ಯಾಯ ಮಾಡೋಕೆ ಮಾತ್ರ ಇರೋದಾ” ಎಂದು ಕುಟುಕಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X