ಬೆಂಗಳೂರು ಕೇಂದ್ರ | ಕ್ರೈಸ್ತರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿ; ಕ್ರೈಸ್ತರ ಕನ್ನಡ ಸಂಘ ಒತ್ತಾಯ

Date:

Advertisements

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕೆಥೋಲಿಕ್‌ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ರಪಾಯಲ್ ರಾಜ್ ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಬರ್ತಲೋಮಿಯೊ 30 ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಪಕ್ಷ ನಿಷ್ಠೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಬೇಕು ಹಾಗೂ ಕ್ರೈಸ್ತರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ  ಟಿಕೆಟ್ ನೀಡಬೇಕು” ಎಂದು ಆಗ್ರಹಪಡಿಸಿದರು.
“ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಕ್ರೈಸ್ತರು ಕಾಂಗ್ರೆಸ್ ಪರವಾಗಿ ಎಲ್ಲಾ ಚುನಾವಣೆಗಳಲ್ಲೂ ಮತ ನೀಡಿದ್ದಾರೆ. ಅಲ್ಪ ಸಂಖ್ಯಾತರಾದ ಕ್ರೈಸ್ತರು ಅಂದಿನಿಂದಲೂ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದಾರೆಂದು ವಿಷಾದದಿಂದ ನಮ್ಮ ಸಂಘಟನೆ ಹೇಳಬಯಸುತ್ತಿದೆ. ಆದರೂ ಶಾಂತಿ ಪ್ರಿಯರಾದ ನಮ್ಮ ಧರ್ಮಿಯರು ಯಾವುದೇ ರೀತಿಯ ಒತ್ತಡವನ್ನು ಕಾಂಗ್ರೆಸ್ ಪಕ್ಷದ ಮೇಲಾಗಲಿ ಅಥವಾ ರಾಜಕಾರಣಿಗಳ ಮೇಲಾಗಲಿ ಹೇರಿಲ್ಲ. ಶಾಂತಿಯುತವಾಗಿ ಎಲ್ಲ ಚುನಾವಣೆಗಳಲ್ಲೂ ಕ್ರೈಸ್ತ ಧರ್ಮಿಯರಿಗೆ ಸೂಕ್ತ ಸಂಖ್ಯೆಯ ಟಿಕೆಟ್ ನೀಡುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಪಕ್ಷ ಸೂಕ್ತ ಅವಕಾಶಗಳನ್ನು ನೀಡಿಲ್ಲ ಎಂಬುದು ದುರಾದೃಷ್ಟಕರ ಸಂಗತಿ” ಎಂದರು.
“ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ರೈಸ್ತ ಧರ್ಮಿಯರು ಬಹು ಸಂಖ್ಯಾತರಿದ್ದಾರೆ.  ಅಷ್ಟೇ ಅಲ್ಲ ಮುಸ್ಲಿಂರಷ್ಟೆ ಸಂಖ್ಯೆಯ ಮತದಾರರಿದ್ದಾರೆ. ಈ ಕ್ಷೇತ್ರದಿಂದ ಕ್ರೈಸ್ತ ಧರ್ಮಿಯರಿಗೆ ಲೋಕ ಸಭಾ ಟಿಕೆಟ್ ನೀಡಿದರೆ ಈ ಕ್ಷೇತ್ರದಿಂದ ಬರ್ತಲೋಮಿಯೊ ಜಯಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ.  ಕಾಂಗ್ರೆಸ್ ಪಕ್ಷಕ್ಕೆ ಕ್ರೈಸ್ತರು ನೀಡಿರುವ ನಿರಂತರವಾದ ಬೆಂಬಲ ಮತ್ತು ರಾಜ್ಯಕ್ಕೆ ಕ್ರೈಸ್ತ ಮಿಷನರಿಗಳು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸುವಂತೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದರು. ಪತ್ರಿಕಾ ಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಉಪಾಧ್ಯಕ್ಷ ಜಾನ್ ಬ್ರಿಟೋ ಸಂಘದ ಪದಾಧಿಕಾರಿಗಳಾದ ಮರಿಜಾನ್, ಥಾಮಸ್, ಭಾಗವಹಿಸಿದ್ದರು.
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X